ಬಂಟ್ವಾಳ: ಜಿಲ್ಲಾ ಪಂಚಾಯತ್ ದ.ಕ., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಬಂಟ್ವಾಳ ಹಾಗೂ ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ರಾಯಿ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ಹರ್ ಘರ್ ಜಲ್ (ಮನೆ ಮನೆಗೆ ಗಂಗೆ) ಉತ್ಸವ ಕಾರ್ಯಕ್ರಮದ ಉದ್ಘಾಟನೆ ಸೋಮವಾರ ಬಂಟ್ವಾಳ ತಾ. ಕೊಯಿಲ ಸ.ಪ್ರೌ.ಶಾಲೆಯಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರಸರಕಾರದ ಯೋಜನೆ ಪ್ರತಿಮನೆಗೂ ನಳ್ಳಿನೀರು ಸಂಪರ್ಕಕ್ಕಾಗಿ ಈಗಾಗಲೇ 34 ಕೋಟಿ ರೂ. ಅನುದಾನದಲ್ಲಿ ಅನುಷ್ಠಾನಗೊಳ್ಳುತ್ತಿದ್ದು ಬಾಕಿ ಗ್ರಾಮಗಳಿಗೆ 20 ಕೋಟಿ ರೂ. ಅನುದಾನ ಮಂಜೂರಾಗಿದ್ದು ಶೀಘ್ರವೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಹೇಳಿದರು.
ದೇಶದ ಪ್ರತಿಯೊಬ್ಬ ಪ್ರಜೆಗೂ ನಿರ್ಮಲ, ಪರಿಶುದ್ಧ ಕುಡಿಯುವ ದೊರಕಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಹರ್ ಘರ್ ಜಲ್ ಅತ್ಯಂತ ಜನಪರ ಯೋಜನೆಯಾಗಿದೆ ಎಂದು ಹೇಳಿದರು.
ಬಂಟ್ವಾಳ ತಾಲೂಕಿನಲ್ಲಿ ಹಲವಾರು ಕಡೆ ಅಣೆಕಟ್ಟು ನಿರ್ಮಿಸಿ ಪ್ರಥಮ ಹಂತದಲ್ಲಿ 149 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇನ್ನೂ 24ಕಾಮಗಾರಿಗಳನ್ನು ಗಳನ್ನು ನಡೆಸಲಾಗುವುದು. ಮುಂದಿನ ವರ್ಷ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಸಂಪೂರ್ಣ ಕಲ್ಪಿಸಲಾಗುವುದು ಎಂದರು.
ರಾಯಿ ಗ್ರಾ.ಪಂ.ಅಧ್ಯಕ್ಷೆ ರತ್ನಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಽಕಾರಿಡಾ.ಕುಮಾರ್‌ಅವರು ಪ್ರಮಾಣ ಪತ್ರ ವಿತರಿಸಿ ಮಾತನಾಡಿ,ಕೇಂದ್ರ ಸರಕಾರದ ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯ ಸರಕಾರ ಅನುಷ್ಠಾನಗೊಳಿಸುತ್ತಿರುವ ಮನೆ ಮನೆಗೆ ಗಂಗೆ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೆ ಶುದ್ಧ ಕುಡಿಯುವ ನೀರು ನಲ್ಲಿ ಸಂಪರ್ಕ ಮೂಲಕ 2024 ಇಸವಿಯೊಳಗೆ ಪೂರೈಸಲಾಗುವುದು ಎಂದು ಹೇಳಿದರು.
ಬಂಟ್ವಾಳ ಸಹಾಯಕ ಕಾರ್ಯ ನಿರ್ವಹಣಾ ಅಭಿಯಂತರ ಜಿ.ಕೆ.ನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಫಲ್ಗುಣಿ ನದಿಯಿಂದ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಶುದ್ಧೀಕರಿಸಿದ ನೀರು ಒದಗಿಸಲಾಗುತ್ತಿದೆ ಎಂದರು.
ಜಿ.ಪಂ. ಕು.ನೀ.ನೈ.ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ನರೇಂದ್ರ ಬಾಬು, ಬಂಟ್ವಾಳ ಸಹಾಯಕ ಕಾರ್ಯ ನಿರ್ವಹಣಾ ಅಭಿಯಂತರ ಜಿ.ಕೆ.ನಾಯ್ಕ್, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿರಾಜಣ್ಣ , ಗ್ರಾಮ ಪಂಚಾಯತ್ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಅಜಿತ್ ಕೆ.ಎನ್.,ರಾಯಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಕೊಲ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಶಾಲಾ ಮುಖ್ಯ ಶಿಕ್ಷಕ ಸಿಪ್ರಿಯನ್ ಡಿಸೋಜ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು,ನರಿಕೊಂಬು ಗ್ರಾ.ಪಂ.ಅಧ್ಯಕ್ಷೆ ವಿನಿತಾ, ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ ಹಲಕ್ಕೆ, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ರಾಯಿ ಗ್ರಾ.ಪಂ.ಪಿಡಿಒ ಮಧು ಟಿ.ಎಲ್., ಜಲಜೀವನ್ ಮಿಷನ್ ಯೋಜನಾ ವ್ಯವಸ್ಥಾಪಕ ವಿಘ್ನೇಶ್‌ರಾಜ್, ಎಂಜಿನಿಯರ್ ನಾಸೀರ್, ಜೆಜೆಎಮ್ ಅನುಷ್ಠಾನ ಬೆಂಬಲ ಸಂಸ್ಥೆಯ ಎಚ್‌ಆರ್‌ಡಿ ಚರಣ್‌ರಾಜ್, ಜಿ.ಪಂ.ಎಂಜಿನೀಯರಿಂಗ್ ಬಂಟ್ವಾಳ ವಿಭಾಗದ ಅಭಿಯಂತರರರಾದ ಕೃಷ್ಣ, ಜಗದೀಶ್, ಜೆಜೆಎಮ್ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಗ್ರಾಮ್ಸ್ ನ ಸಿಬಂದಿಗಳಾದ ವಿಲ್ಮಾ,ಗುಣವತಿ,ಚಂದ್ರಶೇಖರ್, ಅನುಷ್ಠಾನ ಬೆಂಬಲ ಸಂಸ್ಥೆ ಸಿಬಂದಿಗಳು, ವಿವಿಧ ಗ್ರಾ.ಪಂ. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕುಡಿಯುವ ನೀರಿನ ಮಹತ್ವ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.