Tuesday, April 9, 2024

ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನ್ಯಾಯ ಬೆಲೆ ಅಂಗಡಿಗಳು ಹೆಚ್ಚಿನ ಪಾರದರ್ಶಕತೆ ಹೊಂದಿವೆ :ಪ್ರಭಾಕರ ಪ್ರಭು

ಇತ್ತೀಚಿನ ದಿನಗಳಲ್ಲಿ ಪಡಿತರ ಆಹಾರ ಸಾಮಾಗ್ರಿಗಳ ವಿತರಣೆ ಮಾಡುವ ನ್ಯಾಯ ಬೆಲೆ ಅಂಗಡಿಗಳ ವ್ಯವಸ್ಥೆಯನ್ನು ಸರಕಾರವು ಸ್ಥಳೀಯ ಸಹಕಾರ ಸಂಘಗಳಿಗೆ ಪ್ರಾತಿನಿದ್ಯ ನೀಡುತ್ತಿದ್ದು ಈ ನಿಟ್ಟಿನಲ್ಲಿ ಹೆಚ್ಚಿನ ನ್ಯಾಯ ಬೆಲೆ ಅಂಗಡಿಗಳು ಪಾರದರ್ಶಕತೆಯನ್ನು ಹೊಂದಿವೆ ಎಂದು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟರು.

ಅವರು ಇವತ್ತು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ರಾಯಿ ಶಾಖಾ ಕಚೇರಿ ಕಟ್ಟಡದಲ್ಲಿ ಸಹಕಾರ ಸಂಘದ ಹೆಸರಲ್ಲಿ ನೂತನ ವಾಗಿ ಪರವಾನಿಗೆ ಪಡೆದ ನ್ಯಾಯ ಬೆಲೆ ಅಂಗಡಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತಾಡಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರತ್ನಕುಮಾರ್ ಚೌಟ ನ್ಯಾಯ ಬೆಲೆ ಅಂಗಡಿ ಉದ್ಘಾಟಿಸಿ ಮಾತನಾಡಿ ಸಿದ್ದಕಟ್ಟೆ ಸಹಕಾರಿ ಸಂಘವು ಸಿದ್ದಕಟ್ಟೆ ಯಲ್ಲಿ ಹಲವು ವರ್ಷಗಳಿಂದ ಪಡಿತರ ಆಹಾರ ಸಾಮಾಗ್ರಿ ವಿತರಣೆ ಮಾಡುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಿದೆ. ಅದೇ ರೀತಿಯಲ್ಲಿ ಆರಂಬೊಡಿ ಮತ್ತು ರಾಯಿ ಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಇನ್ನೂ ಹೆಚ್ಚಿನ ಪ್ರಗತಿ ಹೊಂದುವಂತೆ ಆಗಲಿ ಎಂದು ಶುಭ ಹಾರೈಸಿದರು.

ರಾಯಿ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಭಂಡಾರಿ ಹೊಸ ನ್ಯಾಯ ಬೆಲೆ ಅಂಗಡಿಗೆ ಶುಭ ಹಾರೈಸಿದರು.

ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ ದೀಪ ಬೆಳಗಿಸಿ ಮಾತನಾಡಿ ರಾಯಿ ಗ್ರಾಮದಲ್ಲಿ ಸಹಕಾರ ಸಂಘದ ಶಾಖೆಯ ಜೊತೆಯಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಪ್ರಾರಂಭ ಮಾಡುವ ಮೂಲಕ ಗ್ರಾಹಕರಿಗೆ ಆರ್ಥಿಕ ವಹಿವಾಟುವಿನೊಂದಿಗೆ ಪಡಿತರ ಆಹಾರ ಸಾಮಗ್ರಿ ಗಳನ್ನು ಪೂರೈಸಲು ಸಹಕಾರಿ ಯಾಗಿದೆ ಎಂದು ಹೇಳುವುದರೊಂದಿಗೆ ಕಾರ್ಯಕ್ರಮಕ್ಕೆ ಬಂದಿರುವ ಎಲ್ಲರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಾಯಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಕುಮಾರ್ ರಾಯಿಬೆಟ್ಟು, ದಿನೇಶ್ ಶೆಟ್ಟಿ ಮಡಂದೂರು,ಉಷಾ ಸಂತೋಷ , ಸಂಘದ ನಿರ್ದೇಶಕರಾದ ಹರೀಶ್ ಆಚಾರ್ಯ ರಾಯಿ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು,ಟಿ. ಎಲ್, ಸ್ಥಳೀಯ ಪಶು ವೈದ್ಯಧಿಕಾರಿ ಡಾ! ಉಮೇಶ್ ಕಿರಣ್,ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ,ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ, ರಾಯಿ ಶಾಖಾ ಪ್ರಬಂದಕ ಸಚಿನ್ ಜೈನ್,ಪ್ರಮುಖರಾದ ಪರಮೇಶ್ವರ ಪೂಜಾರಿ,ರಾಘವ ಅಮೀನ್, ರಾಮಣ್ಣ ಗೌಡ ಮಿಯಾಲು, ಕೃಷ್ಣಪ್ಪ ಪೂಜಾರಿ ಕಾರಂಬಡೆ,ಚಂದ್ರಶೇಖರ ಗೌಡ, ಚಂದಪ್ಪ ಮೂಲ್ಯ, ಕಾಂತಪ್ಪ ಪೂಜಾರಿ,ಧರ್ಮಸ್ಥಳ ಯೋಜನೆ ಸೇವಾ ಪ್ರತಿನಿಧಿ ಶ್ಯಾಮಲಾ, ಮತ್ತಿತರರು ಉಪಸ್ಥಿತರಿದ್ದರು.

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ಹಾಗೂ ಸಂಘಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ ಅಲಕ್ಕೆ ಧನ್ಯವಾದವಿತ್ತರು.

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...