Tuesday, April 16, 2024

ತೀರ್ಥ ಸ್ನಾನಕ್ಕೆ ಬಿದಿರಿನ ಕೇರ್ಪು ಮುಹೂರ್ತ

ಬಂಟ್ವಾಳ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಆಗಸ್ಟ್ 27 ರಂದು ನಡೆಯಿತು.ಅನಾಧಿಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.

ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ,ಕೇರ್ಪು ಇಟ್ಟು ದಾರ್ಮಿಕ ವಿಧಿ-ವಿದಾನವನ್ನು ನೆರವೇರಿಸಿ ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೆಸರರಾದ ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಗ್ರಾಮಸ್ತರು ಸೇರಿದಂತೆ ಊರ ಪರ ಊರಿನ ಭಕ್ತಾದಿಗಳು ಉಪಸ್ತಿತರಿದ್ದರು .ದಿನಾಂಕ 27-08-2022ನೇ ಶನಿವಾರದಿಂದ ದಿನಾಂಕ 31-08-2022ನೇ ಬುಧವಾರ ಬಾದ್ರಪದ ಚೌತಿವರೆಗೆ ಗುಹಾ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಮುಕ್ತ ಅವಕಾಶ ಇದೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...