ದ.ಕ ಜಿಲ್ಲೆಯಲ್ಲಿ ರಾತ್ರಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವು ಮಾಡಲಾಗಿದೆ ಎಂದು
ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಕೊಲೆ ಕೃತ್ಯ ಹಿನ್ನೆಲೆಯಲ್ಲಿ ವಿಧಿಸಿದ್ದ ರಾತ್ರಿ ನಿರ್ಬಂಧ ತೆರವು ಮಾಡಲಾಗಿದೆ.
ರಾತ್ರಿ 9 ಗಂಟೆಯ ಬಳಿಕ ಇದ್ದ ವ್ಯಾಪಾರ ನಿರ್ಬಂಧ ತೆರವು ಮಾಡಲಾಗಿದೆ.
ಅಂಗಡಿ, ವೈನ್ ಶಾಪ್, ಬಾರ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ.
ಜನರ ಓಡಾಟಕ್ಕೂ ಯಾವುದೇ ನಿರ್ಬಂಧ ಇಲ್ಲ,
ಆಗಸ್ಟ್ 14 ತನಕ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ.