ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇದರ ಆಶಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇದರ ಸಹಕಾರದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢ ಶಾಲೆಗಳ ಯೋಗಾಸನ ಸ್ಪರ್ಧೆ 2022 -23 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಧುಸೂದನ್ ಐತಳ್ ಇವರ ಅಧ್ಯಕ್ಷತೆಯಲ್ಲಿ ವಿಜಯ ಬ್ಯಾಂಕ್ ಇದರ ನಿವೃತ್ತ ಸಹಾಯಕ ಜನರಲ್ ಮ್ಯಾನೇಜರ್ ವಿಜಯ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶತಮಾನೋತರ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕಲ್ಲಡ್ಕ ಕೇವಲ ಸ್ಪರ್ಧೆಯಕ್ಕಾಗಿ ಯೋಗಾಸನ ಮಾಡದೆ ಜೀವನಕ್ಕಾಗಿ ಯೋಗಾಸನ ಮಾಡಬೇಕೆಂದುತಿಳಿಸಿದರು. ಬಂಟ್ವಾಳ ತಾಲೂಕು ದೈಹಿಕ ಪರಿವೀಕ್ಷಕರಾದ ವಿಷ್ಣು ನಾರಾಯಣ ಹೆಬ್ಬಾರ್ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು ವೇದಿಕೆಯಲ್ಲಿ ಗೋಲ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಲಿಖಿತ ಆರ್ ಶೆಟ್ಟಿ , ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಸರ್, ಉಪಸ್ಥಿತರಿದ್ದರು .ಶಾಲಾ ಮುಖ್ಯ ಶಿಕ್ಷಕ ಅಶ್ರಫ್ ಸ್ವಾಗತಿಸಿ, ದೈಹಿಕ ಶಿಕ್ಷಕಿ ಶೋಭಾ ವಂದಿಸಿದರು, ಕಲ್ಲಡ್ಕ ಶಾಲಾ ಸಹ ಶಿಕ್ಷಕಿ ಸೌಮ್ಯ ಲತಾ ರಾವ್ ಕಾರ್ಯಕ್ರಮ ನಿರೂಪಿಸಿದರು.