ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಯುವಮೊರ್ಚಾ ಬಂಟ್ವಾಳ ವಲಯ ವತಿಯಿಂದ ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ನಾಳೆ ಸೆ. 17 ರಂದು ಬಿಸಿರೋಡು ಸ್ಪರ್ಶಾ ಕಲಾ ಮಂದಿರ ದಲ್ಲಿ ರಕ್ತದಾನ, ಅಂಗಾಗ ದಾನ ಮತ್ತು ನೇತ್ರದಾನ ಶಿಬಿರ ನಡೆಯಲಿದೆ ಎಂದು ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮ ವನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿದ್ದಾರೆ.
ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಲಿದ್ದಾರೆ.
ಜಿಲ್ಲಾ ಯುವಮೊರ್ಚಾ ಅಧ್ಯಕ್ಷ
ಗುರುದತ್ ನಾಯ್ಕಗ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.