ಬಂಟ್ವಾಳ, ಸೆ.12: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತ ಯುವಕ.
ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ಅಜ್ಜನ ಮನೆಯಲ್ಲಿ ವಾಸವಿರುವ ಮುಹಮ್ಮದ್ ಶರೀಫ್ ಮರ ಕಡಿಯುವ ಕೆಲಸ ಮಾಡುತ್ತಿದ್ದರು. ರವಿವಾರ ಅಮ್ಟೂರಿನಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕ್ಸಿಗೆ ಪಡೆಯುತ್ತಿದ್ದ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.