ಬಂಟ್ವಾಳ: ಬಂಟ್ವಾಳ ತಾ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ 6ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಅ. 2ರಂದು ಮೂಡುಪಡುಕೋಡಿ ಶಾಲಾ ವಠಾರದಲ್ಲಿ ಜರಗಲಿದೆ.
ಬೆಳಗ್ಗೆ ಪ್ರತಿಷ್ಠೆ , ಭಜನೆ, ಶಾಲಾ ಮಕ್ಕಳಿಂದ ನೃತ್ಯ, ಬಳಿಕ ಧಾರ್ಮಿಕ ಸಭೆ ನಡೆಯಲಿದ್ದು, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಶಾರದಾ ಎಸ್.ರಾವ್ ಹಾಗೂ ನಿವೃತ್ತ ಶಿಕ್ಷಕ ದಾಮೋದರ ರಾವ್ ಸಂಗಬೆಟ್ಟು ಅವರಿಗೆ ಶ್ರೀ ಶಾರದಾ ತಿಲಕ ಪ್ರಶಸ್ತಿ ಪ್ರಧಾನ ನಡೆಯಲಿದೆ. ಮೂಡುಬಿದಿರೆ ಜೈನ ಮಠ ಭಾರತ ಭೂಷಣ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಅವರು ಆಶೀರ್ವಚನ ನೀಡಲಿರುವರು, ಸಭೆಯಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿರುವರು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಬಳಿಕ ತೆಲಿಕೆದ ತೇಟ್ಲ ಯಕ್ಷ ಹಾಸ್ಯ ವೈಭವ, ನಂತರ ಶೋಭಾಯಾತ್ರೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
———————————————————-
