ಬಂಟ್ವಾಳ : ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇ.ಧ.ಗ್ರಾ.ಯೋ. ಇವರ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಒಕ್ಕೂಟ ಬಡಗಕಜೆಕಾರು, ಮಾಡಪಲ್ಕೆ, ತೆಂಕಕಜೆಕಾರು ಇದರ ಸಹಯೋಗದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆಯಿತು.
ಬೆಳಗ್ಗೆ ದೇಗುಲದ ಪ್ರ.ಅರ್ಚಕ ವಾಸುದೇವ ಆಚಾರ್ಯ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿ ಮಾತನಾಡಿ,ಜಾತಿ, ಧರ್ಮಗಳ ನಡುವೆ ಬೇಧ ಭಾವದ ಕಂದರವನ್ನು ಮುಚ್ಚಿ ಒಂದೇ ಜಾತಿ ಒಂದೇ ಧರ್ಮ ಒಂದೇ ದೇವರು ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿದಾಗ ಸಾಮರಸ್ಯದ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳುನಾಡಿನಲ್ಲಿ ಹಿರಿಯರು ನಡೆಸಿಕೊಂಡು ಬಂದಂತಹ ನಾಗಾರಾಧನೆ, ದೈವ, ದೇವರ ಆರಾಧನೆ ಗಳು ಮುಂದಿನ ತಲೆಮಾರಿಗೆ ಉಳಿಸುವಲ್ಲಿ ಇಂತಹ ಧಾರ್ಮಿಕ ಆಚರಣೆಗಳು ಸಹಕಾರಿಯಾಗಿದೆ ಎಂದರು. ಶಂಭುಗ ಮಾಣಿಕ್ಯಬೀಡಿನ ತಮ್ಮಣ್ಣ ಶೆಟ್ಟಿ ಧಾರ್ಮಿಕ ಪ್ರವಚನ ನಡೆಸಿದರು.
ಜಿ.ಪಂ. ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಬಿ. ಪದ್ಮಶೇಖರ ಜೈನ್, ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ಮೋನಪ್ಪ ಪೂಜಾರಿ ಕಂಡೆತ್ಯಾರು, ಶ್ರೀ ಕ್ಷೇ.ಧ.ಗ್ರಾ.ಯೋಜನೆ ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಬಂಟ್ವಾಳ ಯೋಜನಾಽಕಾರಿ ಜಯಾನಂದ,ಬಡಗಕಜೆಕಾರು ಗ್ರಾ.ಪಂ.ಉಪಾಧ್ಯಕ್ಷ ಕೆ.ಡೀಕಯ ಬಂಗೇರ, ಧ.ಗ್ರಾ.ಯೋಜನೆ ಬಂಟ್ವಾಳ ಒಕ್ಕೂಟ ಅಧ್ಯಕ್ಷ ಚಿದಾನಂದ ರೈ ಕಕ್ಯ, ಬಂಟ್ವಾಳ ತಾ. ರಬ್ಬರ್ ಮತ್ತು ಜೇನು ವ್ಯ.ವಿ.ಸ.ಸಂಘದ ಅಧ್ಯಕ್ಷ ಕೆ.ಎ.ಸತೀಶ್ಚಂದ್ರ, ಉಪನ್ಯಾಸಕ ಡಾ.ದುಗ್ಗಪ್ಪ ಕಜೆಕಾರು, ಕಜೆಕಾರು ಸ.ವ್ಯ.ಸಂಘದ ಮಾಜಿ ಅಧ್ಯಕ್ಷ ಕೆ.ಹರೀಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು, ದೇವಸ್ಥಾನದ ಆಡಳಿತ ಮೊಕ್ತೇಸರ ಯಶೋಧರ ಪೂಜಾರಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪ್ರವೀಣ್ ಅಬುರ, ಭಜನ ಮಂಡಳಿ ಅಧ್ಯಕ್ಷ ವಸಂತ ಮಡಿವಾಳ, ಮಹೇಶ್ವರಿ ಯುವತಿ ಮಂಡಳಿಯ ಅಧ್ಯಕ್ಷೆ ಚಂದ್ರಿಕಾ, ಶಿವಶಕ್ತಿ ಫ್ರೆಂಡ್ಸ್ ಅಧ್ಯಕ್ಷ ಮನ್ಮಥ, ಬಡಗಕಜೆಕಾರು ಮಾಡಪಲ್ಕೆ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ವಸಂತ ಪೂಜಾರಿ, ಪಾಂಡವರಕಲ್ಲು ಒಕ್ಕೂಟ ಅಧ್ಯಕ್ಷ ಗಿರಿಯಪ್ಪ ಪೂಜಾರಿ ತೆಂಕಕಜೆಕಾರು ಒಕ್ಕೂಟ ಅಧ್ಯಕ್ಷ ಸುಜಾತಾ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ವತಿಯಿಂದ ಗುಣಶೇಖರ ಕೊಡಂಗೆ, ಯಶೋಧರ ಪೂಜಾರಿ, ಪ್ರವೀಣ ಅಬುರ ಅವರನ್ನು ಸಮ್ಮಾನಿಸಲಾಯಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಣಶೇಖರ ಕೊಡಂಗೆ ಸ್ವಾಗತಿಸಿ, ಪ್ರಸ್ತಾವಿಸಿದರು. ಧ.ಗ್ರಾ. ಯೋಜನೆ ವಗ್ಗ ವಲಯ ಮೇಲ್ವಿಚಾರಕಿ ಅಶ್ವಿನಿ ವಂದಿಸಿದರು. ಗ್ರಾ.ಪಂ.ಸದಸ್ಯ ದೇವುದಾಸ ಅಬುರ ಕಾರ್ಯಕ್ರಮ ನಿರೂಪಿಸಿದರು.