Sunday, April 14, 2024

ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿರೋಡು ಟ್ರಸ್ಟ್ (ರಿ). ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ವತಿಯಿಂದ, ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜ್ ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾಲೇಜಿನ ವಾಣಿಜ್ಯ ಉಪನ್ಯಾಸಕ ದಿನೇಶ್ ರವರ ಅಧ್ಯಕ್ಷತೆಯಲ್ಲಿ ಜರಗಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜನಜಾಗೃತಿ ವೇದಿಕೆಯ ಬಂಟ್ವಾಳ ತಾಲೂಕು ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಯುವ ಸಮೂಹ ದುಶ್ಚಟ ಗಳಿಗೆ ಬಲಿಯಾಗಲು ಕಾರಣವಾಗುವ ಅಂಶಗಳು ಮತ್ತು ಅದರಿಂದ ಬಿಡುಗಡೆಯಾಗಲು ಅನುಸರಿಸಬೇಕಾದ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ .
. ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ವಲಯ ಅಧ್ಯಕ್ಷರಾದ ತುಳಸಿ, , ಬಾಳ್ತಿಲ ಒಕ್ಕೂಟದ ಅಧ್ಯಕ್ಷೆ ಉಮಾವತಿ, ಪ್ರಮುಖರಾದ ವೆಂಕಟರಾಯ್ ಪ್ರಭು, ಸೇವಾ ಪ್ರತಿನಿಧಿಗಳಾದ ವಿದ್ಯಾ ,ರೇಣುಕಾ ಉಪಸ್ಥಿತರಿದ್ದರು. ಸ್ವಾಸ್ತ್ಯ ಸಂಕಲ್ಪ ಕುರಿತು ಆಯೋಜಿಸಲಾದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು.
ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಶೆಟ್ಟಿ ಸ್ವಾಗತಿಸಿ , ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಶ್ರೀತಾ ಕೆ. ಧನ್ಯವಾದ ನೀಡಿದರು.
ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ, ಕಾರ್ಯಕ್ರಮ ನಿರೂಪಿಸಿದರು

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...