Monday, April 8, 2024

ಕೆದ್ದಳಿಕೆ ಸ.ಹಿ.ಪ್ರಾ.ಶಾಲೆ :ರಜತ ಮಹೋತ್ಸವ* *ಸರಕಾರದಿಂದ ಪಂಚಾಯತ್ ಗೊಂದು ಮಾದರಿ ಶಾಲೆ ನಿರ್ಮಾಣ ಯೋಜನೆ: ಪ್ರತಾಪಸಿಂಹ ನಾಯಕ್

ಬಂಟ್ವಾಳ:ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ  ಪ್ರತೀ ಗ್ರಾಮ ಪಂಚಾಯತ್‌ಗೆ ಒಂದು ಮಾದರಿ ಶಾಲೆಯನ್ನು ನಿರ್ಮಿಸುವ ಯೋಜನೆಯನ್ನು ಸರಕಾರ ಕೈಗೊಳ್ಳುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಕೊರತೆ ಸಮಸ್ಯೆ ಪರಿಹಾರವಾಗಲಿದೆ  ಎಂದು ವಿಧಾನ ಪರಿಷತ್ ಸದಸ್ಯರ ಪ್ರತಾಪ ಸಿಂಹ ನಾಯಕ್ ಅವರು ಹೇಳಿದರು.
ಅವರು ರವಿವಾರ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸ.ಹ.ಪ್ರಾ.ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಬದುಕಿಗೆ ಬೆಳಕನ್ನು ನೀಡುವುದು ಪ್ರಾಥಮಿಕ ಶಿಕ್ಷಣ. ಮಾತೃಭಾಷೆಯಲ್ಲಿ ಶಿಕ್ಷಣ ದೊರೆತಾಗ ಉತ್ತಮ ಜ್ಞಾನ ಲಭಿಸುವುದು. ನಮ್ಮ ಭಾಷೆಯ ಬಗ್ಗೆ , ನಮ್ಮತನದ ಬಗ್ಗೆ   ಕೀಳರಿಮೆ ಸಲ್ಲದು ಎಂದ ಅವರು ನಮ್ಮ ಮಾತೃಭಾಷೆ ತುಳು, ಕನ್ನಡವನ್ನು ಮರೆಯಬಾರದು ಎಂದರು.
ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿ ದೇವಾಡಿಗ ಅವರು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಮಾಜಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ.ತುಂಗಪ್ಪ ಬಂಗೇರ, ಜ್ಯೋತಿಷ ವಿದ್ವಾನ್ ವೆಂಕಟ್ರಮಣ ಮುಚ್ಚಿನ್ನಾಯ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ ಉಡುಪ, ಮೀನುಗಾರಿಕಾ ಇಲಾಖೆ ನಿವೃತ್ತ ಉಪನಿರ್ದೇಶಕ ಪಾರ್ಶ್ವನಾಥ ಪಡಂತ್ರ್ಯಬೆಟ್ಟು, ನಿವೃತ್ತ ಶಿಕ್ಷಕ ಕೃಷ್ಣಪ್ಪ ಬಂಗೇರ, ನಿವೃತ್ತ ತಹಶೀಲ್ದಾರ ಲೋಕೇಶ್ ಕೆ.,ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ,  ಬಂಟ್ವಾಳ ಕ್ಷೇತ್ರ ಸಂಪನ್ಮೂಲಾಽಕಾರಿ ರಾಘವೇಂದ್ರ ಬಲ್ಲಾಳ್, ಮಣಿಪಾಲ ಭಾರತೀಯ  ವಿಕಾಸ ಟ್ರಸ್ಟ್ ವ್ಯವಸ್ಥಾಪಕ ಜೀವನ್ ಕೊಲ್ಯ, ಉದ್ಯಮಿ ಹೇಮಂತ ಕುಮಾರ್ ಮೂರ್ಜೆ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್,ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ ವೈದ್ಯಾಧಿಕಾರಿ ಡಾ.ರಿತೇಶ್ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ರೇವತಿ, ವೀಣಾ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಬ್ರಹ್ಮ ಕುಮಾರಿಯರ ಈಶ್ವರೀಯ ವಿಶ್ವವಿದ್ಯಾಲಯದ ಭಗಿನಿ ಸರೋಜಿನಿ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಕೆದ್ದಳಿಕೆ, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ರಜತ ಮಹೋತ್ಸವ ಸಮಿತಿ ಸದಸ್ಯರು, ಮತ್ತಿತರರು  ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದ  ಉಮಾ ಡಿ.ಗೌಡ ಮತ್ತು ಗೌರವ ಶಿಕ್ಷಕಿಯರನ್ನು ಸಮ್ಮಾನಿಸಲಾಯಿತು.
ಮುಖ್ಯ ಶಿಕ್ಷಕ ಕುಮಾರ್ ಸಿ.ಸ್ವಾಗತಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಾವಳಕಟ್ಟೆ ಪ್ರಸ್ತಾವಿಸಿದರು. ಶಿಕ್ಷಕ ಚಂದಪ್ಪ ಪೂಜಾರಿ ವಂದಿಸಿದರು. ಶಿಕ್ಷಕ ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಕಾರ್ಯಕ್ರಮ ನಿರೂಪಿಸಿದರು.   ——————–

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...