ಗೋಳ್ತಮಜಲು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿನ ಶಿಕ್ಷಕ ಪ್ರವೀಣ್ ಅವರು 2022 -23 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದು, ಇವರನ್ನು ಶಾಲಾ ಪೋಷಕರು ಮತ್ತು ಎಸ್.ಡಿ.ಎಂ.ಸಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಎಲ್ಲಾ ಮಕ್ಕಳಿಗೆ ನಳಿನಾಕ್ಷಿ ಈಶ್ವರ ಕುಲಾಲ್ ಕೊಡುಗೆಯಾಗಿ ನೀಡಿದ ಗುರುತಿನ ಕಾರ್ಡನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಭಾಸ್ಕರ್ ಕುಲಾಲ್, ಉಪಾಧ್ಯಕ್ಷ ಚಂಚಲಾಕ್ಷಿ, ನೆಟ್ಲಾಶಾಲಾ ನಿವೃತ್ತ ಮುಖ್ಯೋಪಾಧ್ಯಾಯಣಿ ಸೆಲಿನಾ ಪಿಂಟೋ, ಉಪಸ್ಥಿತರಿದ್ದರು
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶೋಬಾಲತ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಮನೋಜ್ ವಂದಿಸಿದರು. ಕಲಾ ಶಿಕ್ಷಕ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು .
ಶಾಲಾಅಭಿವೃದ್ಧಿ ಸಮಿತಿಯ ಸದಸ್ಯರುಗಳು , ಹಿರಿಯ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು