Tuesday, April 9, 2024

ಪಿಲಾತಬೆಟ್ಟು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ

ಬಂಟ್ವಾಳ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಪಿಲಾತಬೆಟ್ಟು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ . (ಪ್ರತೀ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ) ಜಲ ಜೀವನ್ ಮಿಷನ್ ಆಶಯದಂತೆ ಎಲ್ಲಾ ಮನೆಗಳಿಗೂ ನಳ್ಳಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್ ತನ್ನ ಗುರಿ ಮುಟ್ಟಿದೆ. ಸೆಪ್ಟೆಂಬರ್ 7 ರಂದು ಬುಧವಾರ ಪಿಲಾತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಹರ್ ಘರ್ ಜಲ್ ಘೋಷಣೆ ಕಾರ್ಯಕ್ರಮ ನಡೆಸಲಾಯಿತು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರ್ಷಿಣಿ ಉಪಾಧ್ಯಕ್ಷ ಶ್ರೀ ಲಕ್ಷ್ಮೀನಾರಾಯಣ ಹೆಗ್ಡೆ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಯಮನಪ್ಪ ಕೊರವರˌ ಪಂಚಾಯತ್ ಸದಸ್ಯರು ˌ ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುˌ ಪಂಪು ಚಾಲಕರು ˌಆಶಾ ಕಾರ್ಯಕರ್ತೆಯರು ˌಆರೋಗ್ಯ ಸಹಾಯಕಿಯರು ಗ್ರಾಮಸ್ಥರು ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಪಿಲಾತಬೆಟ್ಟು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಣೆ ಮಾಡಲಾಯಿತು ಪಂಚಾಯತಾ ಅಧ್ಯಕ್ಷರು ಮಾತನಾಡಿ ಜಲಜೀವನ್ ಮಿಷನ್ ನ ಅನುಷ್ಠಾನ ಯಶಸ್ವಿಯಾಗಿದೆ ಸರ್ಕಾರದ ಈ ಯೋಜನೆ ಗ್ರಾಮದ ಪ್ರತಿಯೊಬ್ಬರಿಗೂ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸಿ ಕೊಡಲು ಸಹಕಾರಿಯಾಗಿದೆ. ಆದುದರಿಂದ ಈ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲು ಸಂತೋಷವಾಗುತ್ತದೆ ಎಂದು ತಿಳಿಸಿದರು.
ಜಲಜೀವನ್ ಮಿಷನ್ ನ ಯೋಜನಾ ವ್ಯವಸ್ಥಾಪಕ ಶ್ರೀ ವಿಘ್ನೇಶ್ ರಾಜ್ ˌ ಕಿರಿಯ ಅಭಿಯಂತರರು ಕೃಷ್ಣ ˌಇಂಜಿನಿಯರ್ ಅಶ್ವಿನ್ˌ ಅನುಷ್ಠಾನ ಬೆಂಬಲ ಸಂಸ್ಠೆಯ ಚರಣ್ ರಾಜ್ˌ ಅನುಷ್ಥಾನ ಬೆಂಬಲ ಸಂಪನ್ಮೂಲ ಸಂಸ್ಠೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು ಪಂ. ಅ. ಅಧಿಕಾರಿಯವರು ಕಾರ್ಯಕ್ರಮವನ್ನು ನಿರೂಪಿಸಿದರು

More from the blog

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....