ಬಂಟ್ವಾಳ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಹಿಂದೂ ಹಿತರಕ್ಷಣಾ ವಿಶ್ವಸ್ಥ ಮಂಡಳಿ ಟ್ರಸ್ಟ್ (ರಿ) ಸಂಗಬೆಟ್ಟು ಮಂಡಲ ಸಿದ್ಧಕಟ್ಟೆ ಹಾಗೂ
ಗುಣಶ್ರೀ ವಿದ್ಯಾಲಯ ದ ಪದವಿ ಹಾಗೂ ಪದವಿ ಪೂರ್ವ ಕಾಲೇಜು, ಸಿದ್ಧಕಟ್ಟೆ
ಇದರ ಆಶ್ರಯದಲ್ಲಿ
ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನವು
ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದ ಆವರಣದಲ್ಲಿ ಮಂಗಳವಾರ ನಡೆಯಿತು. ಗಿಲ್ಬರ್ಟ್ ಡಿಕೊಸ್ತಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗುಣಶ್ರೀ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಪೂಜಾ, ಅಂಚೆ ಇಲಾಖೆಯ ಮಾರ್ಕೆಟಿಂಗ್ ಎಕ್ಸಕ್ಯೂಟಿವ್ ಗುರುಪ್ರಸಾದ್,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನೊಣಯ್ಯ ಶೆಟ್ಟಿಗಾರ್, ಹಿಂದೂ ಹಿತರಕ್ಷಣಾ ವಿಶ್ವಸ್ತ ಮಂಡಳಿ ಅಧ್ಯಕ್ಷ ದೇವಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಸುಮಾರು 200 ಮಂದಿ ಕಾರ್ಯಕ್ರಮ ದ ಪ್ರಯೋಜನ ಪಡೆದುಕೊಂಡರು.