Tuesday, April 9, 2024

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕಾರು ಢಿಕ್ಕಿ: ಬಾಲಕ ಸಾವು

 

ಬಂಟ್ವಾಳ:  ಕಾರು ಢಿಕ್ಕಿಯಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾಗ ಸಂಜೆ ನಡೆದಿದೆ.

ಇಲ್ಲಿನ ಮಹಮ್ಮದಲಿ ಸಖಾಫಿ ಎಂವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಆದಿಲ್ ದಾರುಲ್ ಅಶ್ ಅರಿಯ ಆಂಗ್ಲ ಮಾದ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಯಲ್ಲಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
——————-

More from the blog

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...