Saturday, April 6, 2024

ವೇಣೂರು ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಶೆಣೈ ನಿಧನ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಕಾನ್ಟೇಬಲ್ ಅಗಿ ಕರ್ತವ್ಯ ಆರಂಭಿಸಿದ ಸುಭಾಷ್ ಶೆಣೈ ಮಂಗಳೂರು ಸಂಚಾರಿ ಠಾಣೆ, ಬಂಟ್ವಾಳ, ಪುಂಜಾಲಕಟ್ಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹೆಡ್ ಕಾನ್ಟೇಬಲ್ ಅಗಿ ಬಡ್ತಿ ಹೊಂದಿದ್ದು ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಎಎಸ್‌ಐ ಅಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.

ಪ್ರತಿ ಕಡೆ ನಡೆಯುವಂತೆ ವೇಣೂರು ಪೊಲೀಸ್ ಠಾಣೆಯಲ್ಲಿಯೂ ಆಯುಧ ಪೂಜೆಯನ್ನು ಆಚರಿಸಿದ್ದು ಸುಭಾಷ್ ಶೆಣೈ ಕೂಡಾ ಸಹೋದ್ಯೋಗಿಗಳ ಜೊತೆ ಆಯುಧ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ಮನೆಗೆ ತೆರಳಿದ ಅವರು ಮರುದಿನವೇ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅ.15 ರಂದು ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಸುಭಾಷ್ ಶೆಣೈಯವರು ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, ಸಹೋದ್ಯೋಗಿಯನ್ನು ಕಳೆದುಕೊಂಡ ಪೊಲೀಸರು ಕಂಬನಿ ಮಿಡಿದಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...