Sunday, April 7, 2024

ಸತ್ತುಹೋದ ಮಗುವನ್ನು ವಾಪಸ್ ಕೊಡುತ್ತೀರಾ..? ಸಿ.ಎಂಗೆ ಕಾಂಗ್ರೆಸ್​ ಪ್ರಶ್ನೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಬೆಂಬಲಿಗ ಜಗದೀಶ ಗೌಡ ಎಂಬಾತ ತಮ್ಮ ಕಾಫಿ ತೋಟದಲ್ಲಿ 16 ದಲಿತ ಜನರನ್ನು ಬಂಧನದಲ್ಲಿಟ್ಟುಕೊಂಡು ಚಿತ್ರಹಿಂಸೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅವರ ಜೊತೆಗಿದ್ದ ಗರ್ಬಿಣಿ ಮೇಲೂ ಹಲ್ಲೆ ನಡೆಸಿದ್ದರಿಂದ ಆಕೆಯ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದ್ದು, ಈ ಪ್ರಕರಣದ ವಿರುದ್ಧ ಧ್ವನಿಯೆತ್ತಿರುವ ಕಾಂಗ್ರೆಸ್ ನಾಯಕರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಬಹುಸಂಖ್ಯಾತ ದಲಿತರು ಮತ್ತು ಬಡವರು ನಿಮ್ಮ ಉತ್ತರದ ನಿರೀಕ್ಷೆಯಲ್ಲಿದ್ದಾರೆ ಎಂದು ಪ್ರಶ್ನೆಗಳನ್ನು ಹಾಕಿದ್ದಾರೆ.

ಬಿಜೆಪಿ ನಾಯಕರಿಂದ ದಲಿತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಮೌನವಾಗಿರುವುದೇಕೆ…? ಮೌನ ಎಂದರೆ ಯುದ್ಧತಂತ್ರದ ಅನುಮೋದನೆ ಅಲ್ಲವೇ…? ದೌರ್ಜನ್ಯ ನಡೆದ ಗ್ರಾಮಕ್ಕೆ ನೀವೇಕೆ ಭೇಟಿ ನೀಡಿಲ್ಲ…?. ಆ ತಾಯಿ ಕಳೆದುಕೊಂಡ ಮಗುವನ್ನು ನೀವು ಮರಳಿ ತರಲು ಸಾಧ್ಯವೇ…? ದಲಿತ ದೌರ್ಜನ್ಯಗಳು ಕಳೆದ ವರ್ಷಕ್ಕಿಂತ 54% ರಷ್ಟು ಏಕೆ ಹೆಚ್ಚಿವೆ…? ಈ ಮೂಲಕ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಟಾರ್ಗೆಟ್ ಮಾಡುತ್ತಿದ್ದೀರಾ….? ನಿಮ್ಮ ಸರ್ಕಾರವು 6,500 ಕೋಟಿ ರೂ.ಗಳ ಎಸ್‌ಸಿಪಿ/ಟಿಎಸ್‌ಪಿ ನಿಧಿಗಳನ್ನು ನೀಡುತ್ತಿರುವುದು ಅವರ ಸಬಲೀಕರಣವನ್ನು ದುರ್ಬಲಗೊಳಿಸುವ ಪ್ರಯತ್ನವೇ…? ಇನ್ನಾದರೂ ಎದ್ದೇಳಿ, ಕ್ರಮ ತೆಗೆದುಕೊಳ್ಳಿ ಅಥವಾ ಅಧಿಕಾರದಿಂದ ಕೆಳಗಿಳಿಯಿರಿ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಬೊಮ್ಮಾಯಿ ಸರ್ಕಾರದ ಅಡಿಯಲ್ಲಿ ದಲಿತ ದೌರ್ಜನ್ಯಗಳ ಕೊಳಕು ವಾಸನೆಯು ವಾಕರಿಕೆ ತರುತ್ತಿದೆ. ಕಳೆದ ವರ್ಷಕ್ಕಿಂತ ದಲಿತದ ಮೇಲಿನ ದೌರ್ಜನ್ಯ 54% ಹೆಚ್ಚಳವಾಗಿದೆ. ಬೊಮ್ಮಾಯಿ-ಯಡಿಯೂರಪ್ಪ ದಲಿತರ ಮನೆಗೆ ಭೇಟಿ ನೀಡಿದ ಫೋಟೋ ಎಲ್ಲೆಡೆ ಹರಿದಾಡುತ್ತಿದ್ದಂತೆ, ಬಿಜೆಪಿ ನಾಯಕ 16 ದಲಿತರನ್ನು ಗೃಹಬಂಧನದಲ್ಲಿಟ್ಟಿದ್ದ. ಇದರಿಂದ ಒಬ್ಬ ಅಸಹಾಯಕ ಮಹಿಳೆ ತನ್ನ ಮಗುವನ್ನು ಕಳೆದುಕೊಂಡಿದ್ದಾಳೆ. ಇದು ನಾಚಿಕೆಗೇಡಿನ ಮತ್ತು ಅಸಹ್ಯಕರ ಸಂಗತಿ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಹಲ್ಲೆ ನಡೆಸಿದ ಮಾಲೀಕ : ಕಾರಣ ಕೇಳಿದ್ರೆ ಶಾಕ್ ಅಗ್ತೀರಾ…?

ಚಿಕ್ಕಮಗಳೂರಿನ ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಕಾಫಿ ಎಸ್ಟೇಟ್ ಮಾಲೀಕ ಮತ್ತು ಬಿಜೆಪಿ ಮುಖಂಡ ಜಗದೀಶ ಗೌಡ ಮತ್ತು ಅವರ ಪುತ್ರ ತಿಲಕ್ ಗೌಡ ಮೇಲೆ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರೂ ಪರಾರಿಯಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...