Sunday, April 7, 2024

ಬಾಲಕಿಯನ್ನು ಕಿಡ್ನಾಪ್, ಲೈಂಗಿಕ ದೌರ್ಜನ್ಯ : ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪಾಂಡವರಕಲ್ಲು ನಿವಾಸಿ ನೌಶಾದ್ ಮೇಲೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ. ಕೆಲ ದಿನಗಳ ಹಿಂದೆ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಬಾಲಕಿಯನ್ನುಅ.15 ರಂದು ಶನಿವಾರ ಮುಂಜಾನೆ ವೇಳೆ ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಆ ಬಳಿಕ ವಿಚಾರಣೆ ನಡೆಸಿ ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆ ಗಾಗಿ ಹಾಗೂ ಕೌನ್ಸಿಲಿಂಗ್ ಗಾಗಿ ವೈದ್ಯ ರ ಬಳಿ ಕಳುಹಿಸಲಾಗಿತ್ತು.

ಇದೀಗ ವೈದ್ಯಕೀಯ ರಿಪೋರ್ಟ್ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ವೈದ್ಯ ರು ವರದಿ ನೀಡಿದ್ದಾರೆ. ಈ ವರದಿಯನ್ನು ಆಧರಿಸಿ ಪುಂಜಾಲಕಟ್ಟೆ ಪೋಲಿಸರು ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಆರೋಪಿ ಕೆಲ ಸಮಯಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಮೈಸೂರಿನಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ.

ಇನ್ನು ಆರೋಪಿ ಯುವಕ ನೌಶಾದ್ ಪಾಂಡವರಕಲ್ಲು ಬಾಲಕಿಯ ನೆರೆ ಮನೆಯವನಾಗಿದ್ದು, ಬಾಲಕಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...