Friday, April 5, 2024

ಪೆರಾಜೆ ಯುವಕ ಮಂಡಲ (ರಿ)ಇದರ ವತಿಯಿಂದ ಕಬ್ಬಡ್ಡಿ ಅಂಕಣಕ್ಕೆ ಭೂಮಿ ಪೂಜೆ

ಬಂಟ್ವಾಳ: ಪೆರಾಜೆ ಯುವಕ ಮಂಡಲ (ರಿ)ಪೆರಾಜೆ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಪೆರಾಜೆ ಶಾಲಾ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಅಂಕಣಕ್ಕೆ ದೀಪಾರತಿ ಮಾಡುವ ಮೂಲಕ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

ಯುವಕ ಮಂಡಲದ ಅದ್ಯಕ್ಷರಾದ ಬಾಬು ಪೂಜಾರಿ ಕೊಪ್ಪಳ ಶುಭಹಾರೈಸಿದರು.

ಲಕ್ಷ್ಮೀಶ್ ಪಿ ಕಾರ್ಯಕ್ರಮ ನಿರೂಪಿಸಿದರು. ಮಂಡಳಿಯ ಹಿರಿಯ ಸದಸ್ಯರಾದ ಕುಶಾಲ ಎಂ.ಪೆರಾಜೆ, ಚಂದಪ್ಪ ನಾಯ್ಕ ಅಡ್ಕರೆಕೋಡಿ, ಗಂಗಧರ ಅಲುಂಬುಡ, ತಿಮ್ಮಪ್ಪ ಎಂ, ಕೃಷ್ಣ ಗೌಡ, ರಾಮಣ್ಣ ಗೌಡ ಮತ್ತು ಮಂಡಳಿಯ ಮಾಜಿ ಅದ್ಯಕ್ಷರುಗಳು ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಉಪಸ್ಥಿತರಿದ್ದರು.
ಬಳಿಕ ಸುಡುಮದ್ದು ಪ್ರದರ್ಶನ, ಸಿಹಿತಿಂಡಿ ವಿತರಣೆಯಾಗಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...