Wednesday, April 10, 2024

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದು : ಡಾ.ಕುಮಾರ್

ಮಂಗಳೂರು: ಅ.29; ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದಾಗಿದೆ ಎಂದು ದ.ಕ ಜಿಲ್ಲಾಧಿಕಾರಿ(ಪ್ರಭಾರ ) ಮತ್ತು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.

ಅವರು ಇಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ವತಿಯಿಂದ ನಗರದ ಪತ್ರಿಕಾ ಭವನದಲ್ಲಿಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ (ಐಡಬ್ಲ್ಯುಎಫ್ ಜೆ )ಇದರ 73ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರಜಾಪ್ರಭುತ್ವ ದಲ್ಲಿ ನಾಲ್ಕನೇ ಅಂಗವೆಂದು ಸ್ಥಾನ ಪಡೆದ ಮಾಧ್ಯಮಕ್ಕೆ ಸಮಾಜವನ್ನು ತಿದ್ದುವ ಮಹತ್ವದ ಜವಾಬ್ದಾರಿ ಇದೆ. ಸಮಾಜದ ಮಹತ್ವದ ಅಂಗವಾದ ಪತ್ರಿಕೋದ್ಯಮ ತನ್ನ ವೃತ್ತಿಯ ಪಾವಿತ್ರ್ಯತೆಯನ್ನು ಉಳಿಸಿ ಕೊಳ್ಳಬೇಕಾದ ಅಗತ್ಯವಿದೆ. ಖಡ್ಗ ಗಿಂತ ಲೇಖನಿ ಹರಿತವಾದುದು.ಪತ್ರಿಕಾ ವೃತ್ತಿಗೆ ಅಧ್ಯಯನ ಶೀಲತೆ ಅಗತ್ಯವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದ ಚಲಾವಣೆ ಯ ಸಂದರ್ಭದಲ್ಲಿ ನಮ್ಮ ಅಂತರಂಗದ ಸ್ವಾತಂತ್ರ್ಯ ವನ್ನು ಒತ್ತೆ ಇಡಬಾರದು.ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಕಾರ್ಯಕ್ರ ಮ ದಂತಹ ಸಾಕಷ್ಟು ಕಾರ್ಯ ಕ್ರಮಗಳ ಮೂಲಕ ಮಾದರಿ ಯಾಗಿದ್ದಾರೆ ಎಂದು ಡಾ.ಕುಮಾರ್ ಶ್ಲಾಘಿಸಿದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿಯ ಸದಸ್ಯ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸಮಾ ರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಉಪನ್ಯಾಸಕರರಾಗಿ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಭಾಗವಹಿಸಿ ದ್ದರು.

ಸಂಘದ ಪದಾಧಿ ಕಾರಿಗಳಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿ ದರು. ಪುಷ್ಪ ರಾಜ್ ಬಿ.ಎನ್ ವಂದಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಸಮಕಾಲೀನ ಪತ್ರಿಕೋದ್ಯಮದ ಬಗ್ಗೆ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...