Wednesday, April 10, 2024

ಹಿಟ್ ಅಂಡ್ ರನ್ ಕೇಸ್ : ತಲೆ ಮರೆಸಿಕೊಂಡಿದ್ದ ಆರೋಪಿ ಆಂದ್ರಪ್ರದೇಶದಲ್ಲಿ ಅರೆಸ್ಟ್

ಬಂಟ್ವಾಳ; ಪಾದಾಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಟ್ರಾಫಿಕ್ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ತಮಿಳುನಾಡು ಮೂಲದ ಪೆರಂಬದೂರು ಜಿಲ್ಲೆಯ ವೇಪನ್ ತಾಲೂಕಿನ ಪೆರಿಯಾ ವಡಗರೈ ನಿವಾಸಿ ಪರಮಶಿವಂ‌ ಅವರ ಮಗ ಸೇಲ್ವರಾಜ್ ಎಂಬಾತನ ನ್ನು ಆಂದ್ರಪ್ರದೇಶದದ ಕಡಪ ಎಂಬಲ್ಲಿ ಪೋಲೀಸರು ಬಂಧಿಸಿದ್ದಾರೆ.

ಆರೋಪಿ ಸೇಲ್ವರಾಜ್ ಟ್ಯಾಂಕರ್ ಚಾಲಕನಾಗಿದ್ದು, ಈತ 2017 ರಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಬಿಸಿರೋಡು ಕೈಕಂಬದ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದ.

ಆರೋಪಿ ಯನ್ನು ಟ್ರಾಫಿಕ್ ಎಸ್.ಐ.ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿ ಗಳಾದ ದೇವದಾಸ್ ಹಾಗೂ ರಾಜು ಅವರು ಅಂದ್ರಪ್ರದೇಶದಿಂದ ಬಂಧಿಸಿ ಕರೆ ತಂದಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...