Saturday, April 6, 2024

ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತ ದಲ್ಲಿ ಕುವೆಟ್ಟು ನಿವಾಸಿ ಕ್ಲೇವನ್ ಅವಿನ್ ರೊಡ್ರಿಗಸ್ ನಿಧನ

ಕುವೆಟ್ಟು: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಕುವೆಟ್ಟು ನಿವಾಸಿ ಕ್ಲೇವನ್ ಅವಿನ್ ರೊಡ್ರಿಗಸ್ ಮೃತ ಪಟ್ಟ ಘಟನೆ ಅ.11ರಂದು ನಡೆದಿದೆ.

ಕುವೆಟ್ಟು ಸರಕಾರಿ ಶಾಲೆಯ ಹತ್ತಿರದ ಸಿರಿಲ್ ರೊಡ್ರಿಗಸ್ ಮತ್ತು ಮೇರಿ ಮೊಂತೆರೋ ದಂಪತಿಯ ಪುತ್ರನಾಗಿದ್ದು,ಮೃತರು 2ವರ್ಷ ಗಳ ಹಿಂದೆ ಮಡಂತ್ಯಾರು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ನಂತರ ನಿಟ್ಟೆ ಕಾಲೇಜಿನಲ್ಲಿ ಎಂ.ಬಿ.ಎ ಪದವಿ ಮುಗಿಸಿ ದುಬೈಗೆ ಹೋಗಿದ್ದರು. ಆದ್ರೆ 3 ದಿನಗಳ ಹಿಂದೆಯಷ್ಟೆ ಇವರಿಗೆ ಉದ್ಯೋಗ ದೊರಕಿದ್ದು, ಉದ್ಯೋಗದಿಂದ ವಾಪಸಾಗುವ ಸಂದರ್ಭದಲ್ಲಿ ಇಬ್ಬರು ಬೈಕ್ ನಲ್ಲಿ ಚಲಿಸುವಾಗ ಬೈಕ್ ಅಪಘಾತ ವಾಗಿ ರಸ್ತೆ ಡಿವೈಡರ್ ಗೆ ತಾಗಿ ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಂದೆ, ತಾಯಿ, ಸಹೋದರ ಅಜೇಯ್ ರೊಡ್ರಿಗಸ್ ಹಾಗೂ ಬಂದುವರ್ಗದವರನ್ನು ಅಗಲಿದ್ದಾರೆ

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...