Saturday, April 6, 2024

ಲಾರಿ ಮತ್ತು ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ; ಗಂಭೀರ ಗಾಯಗೊಂಡಿದ್ದ ಪಿಕಪ್ ಚಾಲಕ ಸಾವು

ಪುಂಜಾಲಕಟ್ಟೆ: ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಕಪ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪಾಂಡವರಕಲ್ಲು ನಿವಾಸಿ ಚಾಲಕ ಸಾಹಿಲ್ ಚಿಕಿತ್ಸೆ ಫಲಕಾರಿಯಾಗದೆ ಮೃತ ದುರ್ದೈವಿ.

ಇನ್ನು ಜತೆಯಿದ್ದ ಸ್ನೇಹಿತ ಅವಿನಾಶ್ ಹಾಗೂ ಲಾರಿ ಚಾಲಕ ಧನರಾಜ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪುಂಜಾಲಕಟ್ಟೆ ಪ್ರಗತಿ ಹಾರ್ಡ್ ವೇರ್ ಶಾಪ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪಿಕಪ್ ವಾಹನದಲ್ಲಿದ್ದ ಪಾಂಡವರಕಲ್ಲು ನಿವಾಸಿಗಳಾದ ಚಾಲಕ ಸಾಹಿಲ್ ಈತನ ಜತೆಯಿದ್ದ ಸ್ನೇಹಿತ , ಅವಿನಾಶ್ ಹಾಗೂ ಲಾರಿ ಚಾಲಕ ಧನರಾಜ್ ಗಂಭೀರವಾಗಿ ಗಾಯಗೊಂಡಿದ್ದರು.

ಮಂಗಳೂರು ಕಡೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಲಾರಿ ಪುಂಜಾಲಕಟ್ಟೆಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನದ ಬಿಡಿ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿ ಬಿದಿತ್ತು.

ಘಟನೆ ನಡೆದ ಕೂಡಲೇ ಪುಂಜಾಲಕಟ್ಟೆ ಆಸ್ಪತ್ರೆಯ 108 ಚಾಲಕ ಜಗನ್ನಾಥ ಶೆಟ್ಟಿ ಹಾಗೂ ಶ್ರೀರಾಮ‌ನಗರದ ಪ್ರಶಾಂತ್ ಹೆಗ್ಡೆ ಅವರು ಗಾಯಗಳು ಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದರು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...