Saturday, April 6, 2024

ಲಾರಿ ಮತ್ತು ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ; ಮೂವರು ಗಂಭೀರ

ಪುಂಜಾಲಕಟ್ಟೆ: ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮೂವರು ಗಂಭೀರವಾಗಿ ಗಾಯಗೊಂಡು‌ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಯಲ್ಲಿ ನಡೆದಿದೆ.


ಪುಂಜಾಲಕಟ್ಟೆ ಪ್ರಗತಿ ಹಾರ್ಡ್ ವೇರ್ ಶಾಪ್ ಎದುರು  ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಪಘಾತ ಸಂಭವಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರು ಹಾಗೂ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ‌.

ಪಾಂಡವರಕಲ್ಲು ನಿವಾಸಿಗಳಾದ ಚಾಲಕ ಸಾಹಿಲ್ (22) ಈತನ ಜತೆಯಿದ್ದ ಸ್ನೇಹಿತ , ಅವಿನಾಶ್ (18) ಲಾರಿ ಚಾಲಕ ಧನರಾಜ್ (22) ಗಾಯಗೊಂಡವರು.

ಮಂಗಳೂರು ಕಡೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಲಾರಿ ಪುಂಜಾಲಕಟ್ಟೆ ಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನದ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿದೆ..

ಘಟನೆ ನಡೆದ ಕೂಡಲೇ ಪುಂಜಾಲಕಟ್ಟೆ ಆಸ್ಪತ್ರೆಯ 108 ಚಾಲಕ ಜಗನ್ನಾಥ ಶೆಟ್ಟಿ ಹಾಗೂ ಶ್ರೀರಾಮ‌ನಗರದ ಪ್ರಶಾಂತ್ ಹೆಗ್ಡೆ ಅವರು ಗಾಯಗಳು ಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ.

ಸ್ಥಳ ಕ್ಕೆ ಪುಂಜಾಲಕಟ್ಟೆ ಪೋಲೀಸರು ಬೇಟಿ ನೀಡಿದ್ದಾರೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...