Tuesday, April 16, 2024

ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ: ಪೋಲೀಸರ ಕ್ಷಿಪ್ರ ಕಾರ್ಯಚರಣೆ, ಆರೋಪಿ ಸಹಿತ ಸ್ಕಾರ್ಪಿಯೋ ಕಾರು ವಶಕ್ಕೆ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ.
ಮಂಗಳೂರು ಪಲ್ನೀರು ನಿವಾಸಿ ರಿಯಾಜ್ ಎಂಬಾತನ ನ್ನು ಪೋಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಎಸ್.ಪಿ.ಹೃಷಿಕೇಶ್ ಭಗವಾನ್ ಸೋನಾವಣೆ ಪತ್ರಕರ್ತರಿಗೆ ಮಾಹಿತಿ ನೀಡಿದರು.
ಗುರುವಾರ ರಾತ್ರಿ
ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿ ದ ಬಂಟ್ವಾಳ ಪೋಲೀಸರು ಆರೋಪಿ ಚಾಲಕ ಹಾಗೂ ಸ್ಕಾರ್ಫಿಯೋ ವಾಹನವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಕುರಿತು ವಿವರಿಸಿದ ಅವರು ಆರೋಪಿ ವಿರುದ್ದ ಈ ವರೆಗೆ ಯಾವುದೇ ಕ್ರಿಮಿನಲ್ ಪ್ರಕರಣ ಗಳು ದಾಖಲಾಗಿಲ್ಲ.
ಹಾಗೂ ವಾಹನದಲ್ಲಿ ಯಾವುದೇ ಮಾರಕಾಯುಧಗಳು ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದರು.
ಪ್ರಾಥಮಿಕ ತನಿಖೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಘಟನೆ ನಡೆದಿರುವ ಸಾಧ್ಯತೆ ಬಗ್ಗೆ ಅವರು ಸಂಶಯ ವ್ಯಕ್ತಪಡಿಸಿದ್ದು ಪೂರ್ಣ ತನಿಖೆಯ ಬಳಿಕ ಹೆಚ್ಚಿನ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಅವರು ಹೇಳಿದರು.

ಎಡಿಸನಲ್ ಎಸ್.ಪಿ.ಕುಮಾರ್ ಚಂದ್ರ, ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಸ್‌ಐ.ಹರೀಶ್ ನೇತ್ರತ್ವದಲ್ಲಿ ಕಾರ್ಯಚರಣೆ ನಡೆಸಲಾಗಿತ್ತು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...