Saturday, April 6, 2024

ಧರ್ಮಸ್ಥಳ ದೇವರ ದರ್ಶನ ಪಡೆದು ವಾಪಾಸ್ ತೆರಳುತ್ತಿದ್ದಾಗ ಅಪಘಾತ : 5 ಮಕ್ಕಳು ಸೇರಿ 9 ಜನ ಸ್ಥಳದಲ್ಲೇ ಸಾವು

ಹಾಸನ: ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 5 ಮಕ್ಕಳು ಸೇರಿ 9 ಜನ ಮೃತಪಟ್ಟ ಘಟ‌ನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಾಂಧಿ ನಗರ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ನಡೆದಿದೆ.

 

ಸಮರ್ಥ್, ದೀಪ್ತಿ, ತನ್ಮಯಿ, ಧ್ರುವ, ಲೀಲಾವತಿ, ಚೈತ್ರಾ, ವಂದನಾ, ದೊಡ್ಡಯ್ಯ ಹಾಗೂ ಭಾರತಿ ಮೃತ ದುರ್ದೈವಿಗಳು. ಮೃತರೆಲ್ಲರೂ ಟೆಂಪೋ ಟ್ರಾವೆಲರ್​​ ನಲ್ಲಿದ್ದವರಾಗಿದ್ದಾರೆ.

ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಟೆಂಪೋ ಟ್ರಾವೆಲರ್ ನಲ್ಲಿದ್ದವರು ಧರ್ಮಸ್ಥಳಕ್ಕೆ ಹೋಗಿ ಬಾಣವಾರ ಗ್ರಾಮದ ತಮ್ಮೂರಿಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಸಿಲುಕಿದ ಟೆಂಪೋ ಟ್ರಾವೆಲರ್ ನಜ್ಜು ಗುಜ್ಜಾಗಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮದವರು ಎನ್ನಲಾಗಿದೆ.

ಮೃತದೇಹವನ್ನು ಅರಸೀಕೆರೆ ಗ್ರಾಮದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...