Thursday, April 18, 2024

ಚಿಕಿತ್ಸೆ ಫಲಕಾರಿಯಾಗದೆ ಯುವಕ ಜಾಂಡಿಸ್ ಜ್ವರಕ್ಕೆ ಬಲಿ

ಚಿಕಿತ್ಸೆ ಫಲಕಾರಿಯಾಗದೆ ಜಾಂಡಿಸ್ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳ್ತಂಗಡಿಯ ವೇಣೂರು ಪಡ್ಡಂದಡ್ಕ ಸಮೀಪದ ಕಜೆಮನೆ ನಿವಾಸಿ ಕಿಶೋರ್ ಆಚಾರ್ಯ (22) ಜಾಂಡೀಸ್ ಜ್ವರದಿಂದ ಮೃತಪಟ್ಟ ಯುವಕ.

ಕೃಷ್ಣಯ್ಯ ಮತ್ತು ಪದ್ಮಾವತಿ ದಂಪತಿಯ ಪುತ್ರ ಕಿಶೋರ್ ಆಚಾರ್ಯ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಅಕ್ಟೋಬರ್ 26ರಂದು ಜ್ವರ ಮತ್ತೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಾಂಡೀಸ್ ಕಾಯಿಲೆ ಎಂದು ಖಚಿತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಅಂಗಾಂಗ ವೈಫಲ್ಯಕ್ಕೊಳಗಾಗಿ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ಕಿಶೋರ್ ವೇಣೂರು ಪಾರ್ಶ್ವನಾಥ ಪ್ರಿಂಟರ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ, ತಾಯಿ, ಮೂವರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...