Sunday, April 7, 2024

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟಿ ಕಂಠ ಗಾಯನ

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಕನ್ನಡ ಸಂಸ್ಕೃತಿ ಇಲಾಖೆ ನಡೆಸಿದಂತಹ ಕೋಟಿ ಕಂಠ ಗಾಯನದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 1317 ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮಾತೃಭಾರತಿ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ನಮ್ಮ ಸಂಸ್ಕೃತಿ, ಜೀವನ ಮೌಲ್ಯಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದು ಮಾತೃಭಾಷೆಯಲ್ಲಿ. ನಮ್ಮ ಭಾಷೆಯ ಮುಖಾಂತರ ಹೇಳಿದಾಗ ಬಹುಬೇಗನೆ ಅರ್ಥವಾಗುತ್ತದೆ. ಇಂದು ಬೇರೆ ಬೇರೆ ಸಾಹಿತಿಗಳು ಬರೆದಿರುವ ಹಾಡನ್ನು ಹಾಡುವುದರ ಮೂಲಕ ನಮ್ಮ ಭಾಷೆಯ ಮೇಲೆ ಇನ್ನಷ್ಟು ಅಭಿಮಾನ ಬರಲಿ. ಸ್ವಾಭಿಮಾನ ನಿರ್ಮಾಣವಾಗಲಿ” ಎನ್ನುವ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕದ ನಾಡಗೀತೆ ಆದಂತಹ ಜೈ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ವಿಶ್ವವಿನೂತನ ವಿದ್ಯಾಚೇತನ ಹಾಗೂ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎನ್ನು ಒಟ್ಟು 5 ಗೀತೆಗಳನ್ನು ಎಲ್ಲಾ ವಿದ್ಯಾರ್ಥಿಗಳು ಒಟ್ಟು ಸೇರಿ ಹಾಡಲಾಯಿತು.

ನಂತರ ಪ್ರತಿಜ್ಞಾವಿಧಿ ಭೋದಿಸಲಾಯಿತು. 7ನೇ ತರಗತಿಯ ರಮ್ಯ ಪ್ರತಿಜ್ಞಾ ವಿಧಿ ಭೋದಿಸಿದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಶಾಲಾ ಶೈಕ್ಷಣಿಕ ಪರಿವೀಕ್ಷಕರಾದ ಮಲ್ಲಿಕಾ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅಂಕಿತ ಸ್ವಾಗತಿಸಿ, ಪವನ್ ನಾಯಕ್ ನಿರೂಪಿಸಿದನು. ದಕ್ಷ ವಂದಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...