Sunday, April 14, 2024

ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಾಲ್ಯ ವಿವಾಹ : 5 ವರ್ಷಗಳಲ್ಲಿ 96 ಪ್ರಕರಣ ಪತ್ತೆ

ಉಡುಪಿ:ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ಇವರೆಗೆ 96 ಪ್ರಕರಣಗಳು ಬೆಳಕಿಗೆ ಬಂದಿವೆ.

ಸರಕಾರಿ ಅಂಕಿ ಅಂಶಗಳ ಪ್ರಕಾರ 2017-18ರಿಂದ 22ರ ವರೆಗೆ ಎರಡು ಜಿಲ್ಲೆಗಳಲ್ಲಿ 96 ಪ್ರಕರಣಗಳು ಬೆಳಕಿಗೆ ಬಂದಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದ 66 ಪ್ರಕರಣಗಳಲ್ಲಿ 57 ಪ್ರಕರಣಗಳನ್ನು ಕೊನೆಯ ಕ್ಷಣ ದಲ್ಲಿ ಪತ್ತೆಹಚ್ಚಿ ತಡೆಯಲಾಗಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ 30 ಪ್ರಕರಣಗಳ ಪೈಕಿ 27 ಪ್ರಕರಣಗಳನ್ನು ತಡೆಯಲಾಗಿದೆ. ವಿವಿಧ ಇಲಾಖೆ ಹಾಗೂ ಸಮಾಜದ ಜಾಗೃತಿ ಕಾರ್ಯದ ಮಧ್ಯೆಯೂ ಉಭಯ ಜಿಲ್ಲೆಗಳಲ್ಲಿ 12 ಬಾಲ್ಯ ವಿವಾಹ ನಡೆದಿದ್ದು, ಎಫ್ಐಆರ್ ಕೂಡ ದಾಖಲಾಗಿವೆ.

ಬಾಲ್ಯ ವಿವಾಹ ತಡೆಗೆ ರಾಜ್ಯ, ಜಿಲ್ಲೆ, ತಾಲೂಕು, ಗ್ರಾ.ಪಂ. ವ್ಯಾಪ್ತಿಯಲ್ಲಿ 58 ಸಾವಿರ ಅಧಿಕಾರಿಗಳನ್ನು ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳೆಂದು ಸರಕಾರ ಗುರುತಿಸಿದೆ. ಇದರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಪೊಲೀಸ್‌ ಇಲಾಖೆ ಸಹಿತ 10 ಇಲಾಖೆಯ ಅಧಿಕಾರಿಗಳಿಗೆ ಹೊಣೆ ವಹಿಸಲಾಗಿದೆ. ಜೊತೆಗೆ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಗೆ ಅಥವಾ ಹತ್ತಿರುವ ಪೊಲೀಸ್‌ ಠಾಣೆಗೆ ದೂರು ನೀಡಿದರೆ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...