ಬೆಂಗಳೂರು: ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ.

ವಿದ್ಯುತ್ ದರವನ್ನು ಏರಿಕೆ ಮಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇನ್ನು ಬಿಬಿಎಂಪಿ ಚುನಾವಣೆ, ಆರು ತಿಂಗಳಲ್ಲೇ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ದರ ಏರಿಕೆಯ ಬಿಸಿ ಸರ್ಕಾರದ ಮೇಲೆ ಬೀಳುವ ಭೀತಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇನ್ನು ಈ ಸಂಬಂಧ ಪರಿಷ್ಕೃತ ಆದೇಶವನ್ನು ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲು ಇಂಧನ ಸಚಿವ ಸುನೀಲ್ ಕುಮಾರ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.