ಮಂಗಳೂರು; ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ ಅವಾರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರಕರ್ತರು ಸಾಕಷ್ಟು ಒತ್ತಡಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ ಎಂದು ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ. ಜೊತೆಗೆ ಪ್ರವಾಸೋದ್ಯಮದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.
ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ(ರಿ)ದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಪದಾಧಿಕಾರಿ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ, ಆರಿಫ್ ಪಡು ಬಿದ್ರೆ, ಪುಷ್ಪ ರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ ರಾಜೇಶ್ ಪೂಜಾರಿ, ಭರತ್ ರಾಜ್, ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.
ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.