Wednesday, April 10, 2024

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಸ್.ಎಂ ಅಬೂಬಕ್ಕರ್ ನಿಧನ

ವಿಟ್ಲ: ಕೊಳ್ನಾಡು ಗ್ರಾಮದ ಸುರಿಬೈಲು ನಿವಾಸಿ ಎಸ್.ಎಂ ಅಬೂಬಕ್ಕರ್ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಸುರಿಬೈಲ್ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದರು. ಶಾಲೆಯಲ್ಲಿ ಸುತ್ತಲೂ ಹೂದೋಟ, ತರಕಾರಿ, ಅಡಿಕೆ ಮರ ನೆಟ್ಟು ಅದರ ಪೋಷಣೆ ಮಾಡುತ್ತಿದ್ದರು. ಇನ್ನು ಇವರ ಪರಿಶ್ರಮದಿಂದ ಈ ಶಾಲೆಗೆ ರಾಷ್ಟ್ರೀಯ ಪರಿಸರ ಪ್ರಶಸ್ತಿ ಸಹಿತ ಮೊದಲಾದ ಗೌರವಗಳು ದೊರಕಿದೆ.

ಮಾತ್ರವಲ್ಲದೆ ಇವರ ಗಣನೀಯ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ರಾಜ್ಯ ಎಸ್ ಡಿ ಎಂ ಸಿ ಸಮಿತಿಯಲ್ಲಿ ಪದಾಧಿಕಾರಿಯಾಗಿ, ಸುರಿಬೈಲು ಮಸೀದಿಯ ಆಡಳಿತ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಕೊಳ್ನಾಡು ಗ್ರಾಮ ಪಂಚಾಯತ್ ನಲ್ಲಿ ಎರಡು ಅವಧಿಯಲ್ಲಿ ಸದಸ್ಯರಾಗಿದ್ದರು. ಕೊಡುಗೈ ದಾನಿಯಾಗಿದ್ದರು.

ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯ ಎಂ ಎಸ್ ಮಹಮ್ಮದ್, ಕಾಂಗ್ರೆಸ್ ಪಂಚಾಯತ್ ರಾಜ್ ಸಮಿತಿಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಭೇಟಿ ನೀಡಿ, ಅಂತಿಮ ದರ್ಶನ ಪಡೆದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...