ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತಿಯಾಗಿದ್ದು, ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆಯ ಅಥವಾ ಯುವತಿ ಎಂಬುದು ಸರಿಯಾಗಿ ತಿಳಿಯಲು ಸಾಧ್ಯವಾಗುತ್ತಿಲ್ಲ, ಆದರೆ ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಸಧ್ಯ ಇದೀಗ ಯುವತಿ ಅಥವಾ ಮಹಿಳೆಯ ಶವ ಪತ್ತೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಪೋಲಿಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ, ಶವದ ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.