Wednesday, April 10, 2024

ಕೊಟ್ಟ ಮಾತಿನಂತೆ ಅಶಕ್ತರಿಗೆ ನೆರವಾದ ದೇವದಾಸ್ : ಪ್ರೇತದ ವೇಷ ಹಾಕಿ ಸಂಗ್ರಹಿಸಿದ ಮೊತ್ತವನ್ನು ಎರಡು ಕುಟುಂಬಗಳಿಗೆ ಹಸ್ತಾಂತರ

ಬಂಟ್ವಾಳ: ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ಸರಪಾಡಿಯ ದೇವದಾಸ್ ನಾಯ್ಕ್ ಅವರು ಸಂಗ್ರಹಿಸಿದ ಧನ ಸಹಾಯವನ್ನು ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಸಂಬಂಧಪಟ್ಟ ಕುಟುಂಬಗಳಿಗೆ ಹಸ್ತಾಂತರಿಸಿದರು.

ಬಳಿಕ ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಪ್ರಾರ್ಥನೆಯ ಮೂಲಕ ಹಾರೈಸಿದರು.

ಕಿಡ್ನಿ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಲ್ಲಡ್ಕ ನಿವಾಸಿ ಇಬ್ಬರು ಮಕ್ಕಳ ಕುಟುಂಬಕ್ಕೆ 30 ಸಾವಿರ ರೂ. ಹಾಗೂ ಮಣಿನಾಲ್ಕೂರು ಗ್ರಾಮ ನಿವಾಸಿ ಯುವತಿಯ ಮದುವೆಗೆ 2೦ ಸಾವಿರ ರೂ. ನೀಡಿದರು. ಉಳಿದಂತೆ ಸುಮಾರು 7 ಸಾವಿರ ರೂ.ಮೊತ್ತವನ್ನು ಸರಪಾಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಹಸ್ತಾಂತರಿಸಿದರು.

ಈ ವೇಳೆ ದೇವಸ್ಥಾನದ ಅರ್ಚಕ ಜಯರಾಮ ಕಾರಂತ, ಸ್ಥಳೀಯ ಪ್ರಮುಖರಾದ ಉಮೇಶ್ ಆಳ್ವ ಕೊಟ್ಟುಂಜ, ಸುರೇಶ್ ಶೆಟ್ಟಿ ಮೀಯಾರು, ದಿನೇಶ್ ಗೌಡ ನೀರೊಲ್ಬೆ, ಆನಂದ ಶೆಟ್ಟಿ ಬಾಚಕೆರೆ, ಶುಭಕರ ರೈ ಕೊಟ್ಟುಂಜ, ಗಿರೀಶ್ ನಾಯ್ಕ್ ನೀರಪಲ್ಕೆ, ಸತೀಶ್ ಗೌಡ ಕೊಪ್ಪಲ, ನಾರಾಯಣ ದೇವಾಡಿಗ ಹೊಳ್ಳರಗುತ್ತು, ಚಂದ್ರಶೇಖರ ನಾಯ್ಕ್, ದೇವದಾಸ್ ಅವರ ತಾಯಿ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...