Friday, April 5, 2024

400 ಕೆವಿ ವಿದ್ಯುತ್ ಲೈನ್ ಹಾದು ಹೋಗುವ ಜಮೀನಿಗೆ : ಕೇಂದ್ರ ಹಾಗೂ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿ ವರ್ಗ ಹಾಗೂ ಸ್ಟೆರ್ಲೈಟ್ ಕಂಪೆನಿಯ ಅಧಿಕಾರಿಗಳಿಂದ ಭೇಟಿ, ಪರಿಶೀಲನೆ

ಬಂಟ್ವಾಳ: ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ದ.ಕ.ಜಿಲ್ಲೆಯ ಅರಣ್ಯ ಇಲಾಖೆಯ ಜಮೀನಿನ ಮೂಲಕ ಹಾದು ಹೋಗುವ ಪ್ರದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿ ವರ್ಗ, ಸ್ಟೆರ್ಲೈಟ್ ಕಂಪೆನಿಯ ಅಧಿಕಾರಿಗಳು ಹಲವೆಡೆ ಪರಿಶೀಲನೆ ನಡೆಸಿದ್ದು, ಈ ತಂಡ ವೀರಕಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯ ರೈತರಿಂದ ಆಕ್ರೋಶ ವ್ಯಕ್ತವಾಯಿತು.

ಗ್ರಾಮದ ರೈತರು, ವೀರಕಂಭ ಗ್ರಾ.ಪಂ.ಜನಪ್ರತಿನಿಧಿಗಳು, ರಾಜ್ಯ ರೈತ ಸಂಘ-ಹಸಿರು ಸೇನೆಯ ಪ್ರಮುಖರು ಹಾಗೂ ವಿಟ್ಲ ರೈತ ಹೋರಾಟ ಸಮಿತಿಯವರು ವೀರಕಂಭದಲ್ಲಿರುವ ಬಂಟ್ವಾಳ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ರೈತ ಸಂಘ-ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಅವರು ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಜಿಲ್ಲಾಧಿಕಾರಿಗಳು ದ.ಕ.ಜಿಲ್ಲೆಯ ಹಲವು ಗ್ರಾಮಗಳ ರೈತರ ಜಮೀನನ್ನು ಬಲಿಕೊಟ್ಟು 400 ಕೆವಿ ವಿದ್ಯುತ್ ಮಾರ್ಗ ಅನುಷ್ಠಾನಕ್ಕೆ ಅವಕಾಶ ನೀಡಿದ್ದು, ಕಂಪೆನಿಯ ಬಾಲಂಗೋಚಿಯಂತೆ ವರ್ತಿಸುತ್ತಿದ್ದಾರೆ. ಈ ಕುರಿತು ಈಗಾಗಲೇ ನಾವು ನ್ಯಾಯಾಲಯದಲ್ಲಿ ದಾವೆಯನ್ನೂ ಹೋಡಿದ್ದೇವೆ. ಕೊಡಗಿನ ರೀತಿಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರಿಗೆ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಬಾರದು ಎಂದರು.

ವಿಟ್ಲ ರೈತ ಹೋರಾಟ ಸಮಿತಿಯ ಅಧ್ಯಕ್ಷ ರಾಜೀವ ಗೌಡ ಮಾತನಾಡಿ, ಯೋಜನೆಯ ವಿರುದ್ಧ ನಾವು ನಿರಂತರವಾಗಿ 15 ತಿಂಗಳಿನಿಂದ ಹೋರಾಟ ಮಾಡುತ್ತಿದ್ದು, ಬಡ ರೈತರ ಕೃಷಿ ಭೂಮಿಯ ಮೇಲೆ ಇವರ ಕಣ್ಣು ಬಿದ್ದಿದೆ ಎಂದರು.

ಅರಣ್ಯ ಇಲಾಖೆಯ ಬೆಂಗಳೂರಿನ ಎಐಜಿಎಫ್ ಅಂಜನ್ ಅವರು ಮಾತನಾಡಿ, ತಮ್ಮ ಮನವಿಯನ್ನು ನೀಡಿ ಅದನ್ನು ಸರಕಾರದ ಬಳಿಗೆ ತಲುಪಿಸುವುದಾಗಿ ತಿಳಿಸಿದರು. ಯೋಜನೆಗೆ ವಿರೋಧ ವ್ಯಕ್ತಪಡಿಸಿ ಎಐಜಿಎಫ್ ಅಂಜನ್ ಹಾಗೂ ಡಿಸಿಎಫ್ ದಿನೇಶ್‌ಕುಮಾರ್ ವೈ.ಕೆ. ಅವರಿಗೆ ರೈತರು ಮನವಿ ನೀಡಿದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಸುಬ್ರಹಣ್ಯ ರಾವ್, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಸಮಾಜಿಕ ವಲಯ ಅರಣ್ಯಾಧಿಕಾರಿ ರವಿಕುಮಾರ್, ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಶೀಲಾ ನಿರ್ಮಲ ವೇಗಸ್, ಸದಸ್ಯರಾದ ಜನಾರ್ದನ ಪೂಜಾರಿ, ರಘು ಪೂಜಾರಿ, ಅಬ್ದುಲ್ ರಹಿಮಾನ್, ಜಯಪ್ರಸಾದ್, ಸಂದೀಪ್, ಅರಣ್ಯ ಇಲಾಖೆ ಸಿಬ್ಬಂದಿ ಪ್ರೀತಮ್ ಎಸ್, ಶೋಬಿತ್, ದಯಾನಂದ್, ರಂಜಿತಾ ಮೊದಲಾವರಿದ್ದರು. ರೈತರು ಅನಂತಾಡಿಯ ಕೊಂಬಿಲಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬಳಿಗೆ ಬರದಂತೆ ಎಚ್ಚರಿಕೆಯನ್ನೂ ನೀಡಿದರು

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...