Sunday, April 7, 2024

ಕೇನ್ಯ ಗ್ರಾಮದ ನೇಲ್ಯಡ್ಕದಲ್ಲಿ ಪುರುಷರ 55 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ

ಕೇನ್ಯ: ಕೇನ್ಯ ಗ್ರಾಮದ ನೇಲ್ಯಡ್ಕ ದಲ್ಲಿ ಈಗಲ್ ಅಟ್ಯಾಕರ್ಸ್ ರವರಿಂದ ಶ್ರೀ ಆದಿ ನಾಗಬ್ರಹ್ಮ ಮುಗೇರ್ಕಳ ದೈವಸ್ಥಾನ ಮತ್ತು ಕೊರಗಜ್ಜ ದೈವದ ಸಾನಿಧ್ಯ ನೇಲ್ಯಡ್ಕ ಇದರ ಜೀರ್ಣೋದ್ದಾರ ಪ್ರಯುಕ್ತ 55 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟವು ನೇಲ್ಯಡ್ಕ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಎಸ್ ರೈ ಕೇನ್ಯ ಹೊಸಮನೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನೇಲ್ಯಡ್ಕ ಶಾಲಾ ಮುಖ್ಯ ಗುರುಗಳಾದ ಪುರುಷೋತ್ತಮ್ ಬಿ ವಹಿಸಿದ್ದರು.ಮೈದಾನದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರು, ಶಿಕ್ಷಣ ತಜ್ಞರು ಆದ ಉದಯ ಅಮ್ಮಣ್ಣಾಯ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರಾದ ರಾಜೀವ್ ಕಣ್ಕಲ್, ಸುಬ್ರಮಣ್ಯ ಕಣ್ಕಲ್, ಮಿಥುನ್ ಗೌಡ ಕಣ್ಕಲ್ ಉಪಸ್ಥಿತರಿದ್ದರು.

ಒಟ್ಟು 34 ಕಬಡ್ಡಿ ತಂಡಗಳು ಭಾಗವಹಿಸಿದ್ದವು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ರಘುನಾಥ ರೈ ಕೆರೆಕ್ಕೋಡಿವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುಂತಾರು, ಗ್ರಾಮ ಪಂಚಾಯತ್ ಸದಸ್ಯರಾದ ಪಾರ್ವತಿ ಪಿ. ಡಿ., ಆಮೇಚೂರ್ ಕಬಡ್ಡಿ ಅಸೋಸಿಯೇಷನ್ ನ ಗೌರವ ಅಧ್ಯಕ್ಷರಾದ ಅಶೋಕ್ ನೆಕ್ರಾಜೆ, ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾದ ದೇವಿಪ್ರಸಾದ್ ರೈ ಗೆಜ್ಜೆ, ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಗೌಡ ಕಣ್ಕಲ್ ಉಪಸ್ಥಿತರಿದ್ದರು.

ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಶಿವದುರ್ಗ ಫ್ರೆಂಡ್ಸ್ ಕೆಂಜಾಳ, ದ್ವಿತೀಯ ಸ್ಥಾನವನ್ನು ಸಿದ್ದಿವಿನಾಯಕ ಸ್ಪೋರ್ಟ್ಸ್ ಕ್ಲಬ್ ಬೀದಿಗುಡ್ಡೆ, ತೃತೀಯ ಸ್ಥಾನವನ್ನು ನವ ಭಾರತ ಅನಂತಾಡಿ, ಚತುರ್ಥ ಸ್ಥಾನವನ್ನು ಮಿತ್ರ ಬಳಗ ದೇವರಗದ್ದೆ ಪಡೆದುಕೊಂಡಿತು. ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಶಶಿಕಲಾ ಸೂoತಾರು ತಂಡ ಪ್ರಥಮ ಹಾಗೂ ಸವಿತಾ ಮತ್ತು ತಂಡ ದ್ವಿತೀಯ ಸ್ಥಾನ ಪಡೆಯಿತು.

ಮುಂಜುನಾಥ್ ಸ್ವಾಗತಿಸಿ ಈಗಲ್ ಅಟ್ಯಾಕರ್ಸ್ ನ ಅಧ್ಯಕ್ಷರಾದ ಸುರೇಶ ಧನ್ಯವಾದ ಸಲ್ಲಿಸಿದರು. ಸಾಗರ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...