Thursday, April 11, 2024

ಗೂಡ್ಸ್ ಟೆಂಪೋ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಇಲ್ಲಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ‌ ನಡೆದಿದೆ.

ಮೃತರನ್ನು ತೆಂಕ ಮಿಜಾರು ನಿವಾಸಿ ದಿನೇಶ ಸೇಮಿತ(23) ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿವರ ತಿಳಿದು ಬಂದಿಲ್ಲ. ಇವರು ಮೂಡುಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ವೇಳೆ, ಬಿ.ಸಿ.ರೋಡಿನಿಂದ ಮೂಡುಬಿದ್ರೆ ಗೆ ಹೋಗುತ್ತಿದ್ದ ಬೀಡಿ ಸಂಸ್ಥೆಯೊಂದರ ಗೂಡ್ಸ್ ಟೆಂಪೋ ಢಿಕ್ಕಿಯಾಗಿದೆ. ಬೈಕ್ ಸವಾರನ ತಲೆ ರಸ್ತೆಗೆ ಬಡಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಮೆಲ್ಕಾರ್ ಸಂಚಾರಿ ಠಾಣೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...