Friday, April 12, 2024

ದೀಪಾವಳಿ ಹಬ್ಬದ ಪ್ರಯುಕ್ತ ಭಜನೆ, ಗೋಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ

ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಕೊಳ್ನಾಡು ಗ್ರಾಮ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ, ಕೊಳ್ನಾಡು ಗ್ರಾಮ ಇದರ ಜಂಟಿ ಆಶ್ರಯದಲ್ಲಿ, ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇಲ್ಲಿ, ದೀಪಾವಳಿ ಹಬ್ಬದ ಪ್ರಯುಕ್ತ ಭಜನೆ, ಗೋಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರುಗಿತು.


ಮಕ್ಕಳು ತಾವೇ ತಯಾರಿಸಿದ ಗೂಡುದೀಪಗಳಿಂದ ಮಂದಿರವನ್ನು ಅಲಂಕರಿಸಲಾಗಿತ್ತು. ಇತ್ತೀಚೆಗೆ ದೈವಾಧೀನರಾದ ಗಂಗಮ್ಮ ಕಲ್ಲೋಡಿ (ರಘುನಾಥ ನಾಯ್ಕರವರ ಪತ್ನಿ) ಇವರಿಗೆ ಮೂರು ಮಕ್ಕಳಿದ್ದು ಬಡ ಕುಟುಂಬವಾಗಿರುತ್ತದೆ. ವಿದ್ಯಾಭ್ಯಾಸ ನಡೆಸುತ್ತಿರುವ ಈ ಮೂರು ಮಕ್ಕಳು ಮಂಡಳಿಯ ಜೊತೆ ಭಜನೆಯಲ್ಲಿ ತೊಡಗಿಕೊಳ್ಳುತ್ತಿದ್ದು, ದೀಪಾವಳಿಯ ಈ ಕಾರ್ಯಕ್ರಮದಲ್ಲಿ ಇವರಿಗೆ ೫೦ಕಿಲೋ ಅಕ್ಕಿಯನ್ನು ಮಂಡಳಿಯ ವತಿಯಿಂದ ನೀಡಲಾಯಿತು.


ಈ ಸಂದರ್ಭ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಶ್ರೀ ಮಹಮ್ಮಾಯೀ ಮಾತೃ ಮಂಡಳಿ, ಕುಂಟ್ರಕಲ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಇದರ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಂಚಾಲಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...