Friday, April 5, 2024

ಸರಕಾರವು ಎಸ್ ಟಿ ಮೀಸಲಾತಿ ಹೆಚ್ಚಿಸಿ ಸಮುದಾಯಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ರಾಜ್ಯದ ಪರಿಶಿಷ್ಟರ ಜೀವನ ಮಟ್ಟ ಸುಧಾರಣೆಯ ದೃಷ್ಟಿಯಿಂದ ರಾಜ್ಯ ಸರಕಾರವು ಎಸ್.ಟಿ.ಸಮುದಾಯ ಮೀಸಲಾತಿಯನ್ನು 3 ರಿಂದ 7 ಶೇ.ಕ್ಕೆ ಹೆಚ್ಚಿಸುವ ಮೂಲಕ ಸಮುದಾಯಕ್ಕೆ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ಎಸ್.ಟಿ.ಮೋರ್ಚಾದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ದೇರಳಕಟ್ಟೆ ಯೇನಪೋಯ ವೈದ್ಯಕೀಯ ವಿವಿಯ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳದ ದೃಷ್ಟಿಯಿಂದ ಪಕ್ಷದ ಕಾರ್ಯಕಾರಿಣಿಯಲ್ಲೂ ಪ್ರಸ್ತಾಪಗೊಂಡಿದ್ದು, ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ ಕ್ಯಾಬಿನೆಟ್ ನ ಒಪ್ಪಿಗೆಯನ್ನು ಪಡೆದು ಮೀಸಲಾತಿ ಹೆಚ್ಚಳದ ಮಹತ್ವದ ತೀರ್ಮಾನ ಪ್ರಕಟಗೊಂಡಿದೆ. ಪರಿಶಿಷ್ಟರ ಆರೋಗ್ಯದ ದೃಷ್ಟಿಯಿಂದ ಸರಕಾರ ವಿಶೇಷ ಗಮನಹರಿಸಿ ಅದರ ಜತೆಗೆ ಇತರ ಸಮುದಾಯದವರ ಆರೋಗ್ಯದ ದೃಷ್ಟಿಯಿಂದ ಖಾಸಗಿ ಕ್ಷೇತ್ರದಲ್ಲಿ ದುಬಾರಿಯಾಗುವ ಆರೋಗ್ಯ ತಪಾಸಣೆಗಳನ್ನು ಯೆನಪೋಯ ವಿವಿಯ ಸಹಯೋಗದೊಂದಿಗೆ ತಪಾಸಣೆಯ ಕಾರ್ಯ ಮಾಡುತ್ತಿದ್ದು, ಚಿಕಿತ್ಸೆಗೂ ನೆರವು ನಿಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌.ಟಿ.ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ ಕೆ ವಹಿಸಿದ್ದರು. ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಅವರು ಮಹರ್ಷಿ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಮೋರ್ಚಾದ ಪ್ರಭಾರಿ ರಮನಾಥ ರಾಯಿ, ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ, ಬರಿಮಾರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ದೇರಳಕಟ್ಟೆ ಯೆನಪೋಯ ಆಸ್ಪತ್ರೆಯ ವೈದ್ಯೆ ಡಾ.ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.

ಬರಿಮಾರು ಗ್ರಾ.ಪಂ.ಸದಸ್ಯೆ ಪುಷ್ಲಲತಾ ಸ್ವಾಗತಿಸಿದರು. ಬಾಳ್ತಿಲ ಗ್ರಾ.ಪಂ.ಸದಸ್ಯ ವಿಠಲ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...