Sunday, April 7, 2024

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ಆಯ್ಕೆಯಾಗಿದ್ದಾರೆ.

ಬಂಟ್ವಾಳದ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಅ.17ರಂದು ನಡೆದ ಪತ್ರಕರ್ತರೊಂದಿಗಿನ ಮಾತುಕತೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಅವರು ಆಯ್ಕೆಯನ್ನು ಪ್ರಕಟಿಸಿದರು.

ಕಸಾಪ ಹಲವು ಸಮಾಜಮುಖಿ ಕಾರ್ಯಯೋಜನೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಬೆಳಕಿಗೆ ಬಾರದ ಪ್ರತಿಭೆಗಳನ್ನು ಪರಿಚಯಿಸುವ ಕಾರ್ಯವನ್ನು ಮಾಡುತ್ತಿದೆ. ಬಂಟ್ವಾಳ ತಾಲೂಕಿನಲ್ಲಿ ದಿನಪತ್ರಿಕೆಯೊಂದನ್ನು ಸ್ಥಾಪಿಸಿ, ಸ್ಥಳೀಯ ಹಲವು ಪ್ರತಿಭೆಗಳು ಬೆಳಕಿಗೆ ಬರಲು ಕಾರಣರಾದ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಮಾಧ್ಯಮರಂಗದಲ್ಲಿ ಗಣನೀಯ ಸಾಧನೆ ಮಾಡಿದ ಪ್ರೊ.ಗಟ್ಟಿಯವರನ್ನು ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಮಾಧ್ಯಮ ಕ್ಷೇತ್ರಕ್ಕೆ ಕಸಾಪ ನೀಡುವ ಗೌರವವೂ ಹೌದು ಎಂದರು.

ಈ ಸಂದರ್ಭ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ಅಮ್ಮುಂಜೆಯಲ್ಲಿ ನಡೆಯಲಿರುವ ಸಮ್ಮೇಳನದ ವಿವರಗಳನ್ನು ನೀಡಿದರು. ಕಸಾಪ ಗೌರವ ಪ್ರಧಾನ ಕಾರ್ಯದರ್ಶಿ ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ, ಕೋಶಾಧಿಕಾರಿ ಡಿ.ಬಿ.ಅಬ್ದುಲ್ ರಹಮಾನ್, ಪದಾಧಿಕಾರಿಗಳಾದ ಗಣೇಶ ಪ್ರಸಾದ ಪಾಂಡೇಲು, ಚೇತನ್ ಮುಂಡಾಜೆ, ಗೋಪಾಲ ಅಂಚನ್, ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಅಬುಬಕರ್ ಅಮ್ಮುಂಜೆ, ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಪ್ರೊ.ಬಾಲಕೃಷ್ಣ ಗಟ್ಟಿ:

79ರ ಹರೆಯದ ಪ್ರೊ.ಗಟ್ಟಿ, ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ. ಪ್ರಾಧ್ಯಾಪಕರಾಗಿ ಮತ್ತು ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿದ್ದು, ಮಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಪತ್ರಕರ್ತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಪ್ರೊ. ಗಟ್ಟಿ ಅವರು, 1996ರಲ್ಲಿ ಬಂಟ್ವಾಳದಲ್ಲಿ ನೇತ್ರಾವತಿ ವಾರ್ತೆ ಎಂಬ ಪತ್ರಿಕೆ ಹೊರಡಿಸಿ, ಅದರ ಸಂಪಾದಕರಾಗಿ ಸ್ಥಳೀಯ ಹಲವು ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದವರು. 1980ರಿಂದ 1998ರವರೆಗೆ ಬಂಟ್ವಾಳ ತಾಲೂಕು ವರದಿಗಾರರಾಗಿ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸೇವೆ ಸಲ್ಲಿಸಿದ್ದಾರೆ. 1998ರಿಂದ 2003ರವರೆಗೆ ಜನವಾಹಿನಿ ಕನ್ನಡ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ಅವರು, ತಾಲೂಕು ಉಚಿತ ಕಾನೂನು ನೆರವು ಸಮಿತಿ ಸದಸ್ಯರಾಗಿದ್ದರು. ಬಂಟ್ವಾಳ ತಾಲೂಕಿನಲ್ಲಿ ಪತ್ರಕರ್ತರ ಸಂಘದ ಸ್ಥಾಪನೆಗೆ ಕಾರಣಕರ್ತರಲ್ಲೊಬ್ಬರಾಗಿದ್ದ ಪ್ರೊ. ಗಟ್ಟಿ, ಅವರು ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸ್ವರ್ಣರಥದ ವಿಶೇಷ ಸಂಚಿಕೆಯ ಸಂಪಾದಕರಾಗಿದ್ದ ಡಾ. ಗಟ್ಟಿ ಸೃಜನಶೀಲ ಪ್ರತಿಭೆಗಳಿಗೆ ಪ್ರೋತ್ಸಾಹಕರಾಗಿದ್ದವರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...