Saturday, April 6, 2024

ಜಾನುವಾರುಗಳನ್ನು ಕಳವುಗೈದು ಅಕ್ರಮ ಸಾಗಾಟಕ್ಕೆ ಯತ್ನ : ಓರ್ವ ಆರೋಪಿ ಅರೆಸ್ಟ್, ಇನ್ನಿಬ್ಬರು ಎಸ್ಕೇಪ್

ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಬಳಿಕ ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿರುವುದನ್ನು ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಹಾಗೂ ಸಿಬ್ಬಂದಿಗಳು ಶನಿವಾರ ಬೆಳಗ್ಗೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಪತ್ತೆಹಚ್ಚಿ, ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತನನ್ನು ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಎಂದು ತಿಳಿದು ಬಂದಿದೆ. ಜೊತೆಗೆ ಬಿಳಿಯೂರು ಗ್ರಾಮದ ಸತ್ತಿಕಲ್ಲು ನಿವಾಸಿ ಸತ್ತಾರ್ ಹಾಗೂ ರಿಫಾಝ್ ಎಂಬವರನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು, ಇವರಿಬ್ಬರು ತಲೆಮರೆಸಿಕೊಂಡಿದ್ದಾರೆ.

ಶುಕ್ರವಾರ ರಾತ್ರಿ ಗಸ್ತಿನಲ್ಲಿದ್ದ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...