ಮಂಗಳೂರು: ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟು ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಆತನಿಂದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬಾೖಯಿಂದ ಆಗಮಿಸಿದ ಕಾಸರಗೋಡು ನಿವಾಸಿ ಚಿನ್ನದ ಪೌಡರನ್ನು ಗಮ್‌ನಲ್ಲಿ ಮಿಕ್ಸ್ ಮಾಡಿ ಅದನ್ನು ಉಂಡೆ ಮಾಡಿ ಗುದದ್ವಾರದೊಳಗಿಟ್ಟು ಸಾಗಾಟ ಮಾಡಲು ಯತ್ನಿಸಿದ್ದಾನೆ.
ಬಳಿಕ ಕಾಯಾ೯ಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.