Saturday, April 20, 2024

ಕುಸಿತವಾಗಿದ್ದ ಚಿನ್ನದ ಬೆಲೆ ಇಂದು ಹೇಗಿದೆ ; ಬೆಳ್ಳಿ ದರವೆಷ್ಟು ಗೊತ್ತಾ…?

ಬೆಂಗಳೂರು: ಭಾರತದಲ್ಲಿ ಕುಸಿತವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ 270 ರೂ. ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ.

ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 4,645 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,067 ಆಗಿದೆ. ಇದೇ ವೇಳೆ ಎಂಟು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 37,160 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 40,536 ಆಗಿದೆ.
ಹಾಗೇ, ಹತ್ತು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 46,450 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,670 ಆಗಿದೆ. ಇತ್ತ ನೂರು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 4,64,500 ಆಗಿದ್ದು, 24 ಕ್ಯಾರೆಟ್  ಬಂಗಾರದ ಬೆಲೆ (ಅಪರಂಜಿ) – ರೂ 5,06,700 ಆಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,500 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ರೂ. 46,900ರೂ. 46,450, ರೂ. 46,450 ಆಗಿದೆ. ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,600 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 553, ರೂ. 5,530 ಹಾಗೂ ರೂ. 55,300ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 55,300 ಆಗಿದ್ದರೆ ದೆಹಲಿಯಲ್ಲಿ ರೂ. 55,300 ಮುಂಬೈನಲ್ಲಿ ರೂ. 55,300 ಹಾಗೂ ಕೊಲ್ಕತ್ತದಲ್ಲೂ ರೂ. 55,300 ಗಳಾಗಿದೆ.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...