Thursday, October 26, 2023

ಅ.15 ರಂದು ಕುಕ್ಕಿಪ್ಪಾಡಿ ಗ್ರಾ.ಪಂನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ

Must read

ಕುಕ್ಕಿಪ್ಪಾಡಿ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಅ.15 ರಂದು ಬಂಟ್ವಾಳ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಸರಕಾರದ ನಿರ್ದೇಶನದಂತೆ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್‌ ಡಾ.ಸ್ಮಿತಾರಾಮು ರವರ ನೇತೃತ್ವದಲ್ಲಿ ಅ.15 ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕಿಪ್ಪಾಡಿ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಕಂದಾಯ ಇಲಾಖೆ ಹಾಗೂ ಇತರ ಇಲಾಖೆಗಳ ಸವಲತ್ತುಗಳ ವಿತರಣೆ, ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಇನ್ನು ಸಾರ್ವಜನಿಕರು ಯಾವುದಾದರೂ ಅಹವಾಲುಗಳಿದ್ದಲ್ಲಿ ಅ.13 ರೊಳಗೆ ಗ್ರಾಮ ಪಂಚಾಯತ್‌ಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಜೊತೆಗೆ ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

More articles

Latest article