Wednesday, April 10, 2024

ದೀಪಾವಳಿ ಹಬ್ಬದ ವೇಳೆ ಸೂರ್ಯಗ್ರಹಣ : ರಾಜ್ಯದ ಪ್ರಮುಖ ದೇವಾಲಯಗಳು ಬಂದ್

ಬೆಂಗಳೂರು: ಈ ಬಾರಿ ದೀಪಾವಳಿ ಮತ್ತು ಗೋವರ್ಧನ ಪೂಜೆಯ ನಡುವಿನ ಸೂರ್ಯಗ್ರಹಣದ ಸೂತಕ ಅವಧಿಯು ಅಕ್ಟೋಬರ್ 25 ರ ಬೆಳಗ್ಗೆ 4:22 ರಿಂದ ಪ್ರಾರಂಭವಾಗಲಿದೆ. ಆ ದಿನ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಭಕ್ತರಿಗೆ ದರ್ಶನಾವಕಾಶ ಇರುವುದಿಲ್ಲ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅ.25ರ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಯಾವುದೇ ಸೇವೆ ನಡೆಯುವುದಿಲ್ಲ. ಜೊತೆಗೆ ಭೋಜನ ಪ್ರಸಾದವೂ ಇರುವುದಿಲ್ಲ. ಉಡುಪಿ ಶ್ರೀಕೃಷ್ಣಮಠದಲ್ಲಿ ಅ.25 ರಂದು ಸೇವೆ ಹಾಗೂ ಭೋಜನ ವ್ಯವಸ್ಥೆ ಇರುವುದಿಲ್ಲ. ಆದರೆ ಭಕ್ತರಿಗೆ ದೇವರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಧ್ಯಾಹ್ನದ ಪೂಜೆಯು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಬಳಿಕ ರಾತ್ರಿ 7.30 ರವರೆಗೆ ದೇವರ ದರ್ಶನಕ್ಕೆ ಅವಕಾಶವಿದೆ. ಯಾವುದೇ ಸೇವೆಗಳು ಇರುವುದಿಲ್ಲ. ಗ್ರಹಣ ಮೋಕ್ಷಗೊಂಡು ರಾತ್ರಿ 7.30 ರ ಬಳಿಕ ಮಹಾಪೂಜೆ ನಡೆಯಲಿದೆ.

ಅಂದು ಹಾಸನದ ಹಾಸನಾಂಬಾ ದೇವಿಯ ದರ್ಶನ ಇರುವುದಿಲ್ಲ, ಬೇಲೂರು ಶ್ರಿ ಚನ್ನಕೇಶವ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ, ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲವನ್ನು ಸೂರ್ಯಗ್ರಹಣದ ವೇಳೆ ಮುಚ್ಚಲಾಗುತ್ತದೆ. ಮಂತ್ರಾಲಯದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ. ಆದರೆ ಪೂಜೆ ನಡೆಯುವುದಿಲ್ಲ . ಹೊರನಾಡು ಶ್ರೀ ಅನ್ನಪೂರ್ಣೆಶ್ವರಿ ದೇಗುಲದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ. ಆದರೆ ಸೇವೆ, ಪೂಜೆ ಇರುವುದಿಲ್ಲ. ಸಿಗಂಧೂರೇಶ್ವರಿ ದೇವಾಲಯಕ್ಕೆ ಅಂದು ಭಕ್ತರಿಗೆ ಪ್ರವೇಶವಿಲ್ಲ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...