Friday, April 5, 2024

ಮಣಿಹಳ್ಳದಲ್ಲಿ ಭೀಕರ ಸರಣಿ ಅಪಘಾತ : ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ಸಾವು

ಬಂಟ್ವಾಳ: ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ  ವಿಟ್ಲ ಮೆಸ್ಕಾಂ ಎ.ಇ. ಪ್ರವೀಣ್ ಜೋಶಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಮಣಿಹಳ್ಳ ದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದು,  ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ  ಜೋಶಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟ ಬಗ್ಗೆ ಪೋಲಿಸರು ಮಾಹಿತಿ ನೀಡಿದ್ದಾರೆ

ಇದನ್ನೂ ಓದಿ.. ಮಣಿಹಳ್ಳದಲ್ಲಿ ಭೀಕರ ಸರಣಿ ಅಪಘಾತ : ಗಂಭೀರ ಗಾಯಗೊಂಡಿದ್ದ ಮೆಸ್ಕಾಂ ಅಧಿಕಾರಿ ಸಾವು

ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವದಿಂದ ಬರುತ್ತಿದ್ದ ಮೆಸ್ಕಾಂ ಅಧಿಕಾರಿ ಎ.ಇ.ಪ್ರವೀಣ್ ಜೋಶಿ ಅವರ ಕಾರಿನ ನಡುವೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಳಿಕ ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮೆಸ್ಕಾಂ ಅಧಿಕಾರಿ ಜೋಶಿ ಅವರಿದ್ದ ಫಿಗೋ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...