Wednesday, April 10, 2024

ವಿಧಾನಸಭೆ ಉಪಸಭಾಧ್ಯಕ್ಷ ಶಾಸಕ ಆನಂದ್ ಚಂದ್ರಶೇಖರ್ ಮಾಮನಿ ಇನ್ನಿಲ್ಲ

ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ ಅವರು ನಿಧನರಾಗಿದ್ದಾರೆ.

56 ವರ್ಷದ ಆನಂದ್ ಮಾಮನಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ಕಾಯಿಲೆಯಿಂದಾಗಿ ಚೆನ್ನೈ ಖಾಸಗಿ ಆಸ್ಪತ್ರೆ ಪಡೆಯುತ್ತಿದ್ದ ಅವರನ್ನು ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದರು. ಇನ್ನು ಆನಂದ ಮಾಮನಿ ಅವರು ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಕೇವಲ ರಾಜಕೀಯ ಕ್ಷೇತ್ರವಲ್ಲದೆ, ಆನಂದ್ ಮಾಮಿನಿ ಅವರು ಅನೇಕ ಸಮಾಜ ಸೇವೆಯಲ್ಲಿಯೂ ತೊಡಗಿಸಿಕಡಿದ್ದರು. ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸವದತ್ತಿ ಅಧ್ಯಕ್ಷರಾಗಿದ್ದರು.

2000 ರಿಂದ 2002ರ ವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌದತ್ತಿಯ ಸದಸ್ಯರಾಗಿ‌ ಕಾರ್ಯನಿರ್ವಹಿಸಿದ್ದರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ವಿಧಾನಸಭಾ ಉಪಸಭಾಧ್ಯಕ್ಷರಾಗಿದ್ದರು.

 

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...