Sunday, April 7, 2024

ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ಕ್ಷೇತ್ರದ ವಠಾರದಲ್ಲಿ ಹೈಮಾಸ್ಟ್ ದೀಪ ಉದ್ಘಾಟನೆ

ಬಂಟ್ವಾಳ: ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ರವರ ಅನುದಾನದಡಿಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈಯವರ ಶಿಫಾರಸಿನ ಮೇರೆಗೆ ಪದ್ಮನಾಭ ಸಾಮಂತ್ ವಾಮದಪದವು ಇವರ ಹೆಚ್ಚಿನ ಮುತುವರ್ಜಿಯಲ್ಲಿ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನಕ್ಕೆ ಮಂಜುರಾತಿಯಾದ ಹೈಮಾಸ್ಟ್ ದೀಪವು ಶ್ರೀ ಕ್ಷೇತ್ರದ ವಠಾರದಲ್ಲಿ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ,ದೇವಸ್ಥಾನದ ಪ್ರಧಾನ ಅರ್ಚಕ ಸತ್ಯನಾರಾಯಣ ಭಟ್, ಅರ್ಚಕರಾದ ದಯಾನಂದ ಭಟ್ ಅಡ್ಯ ,ದೇವಸ್ಥಾನದ ಆಡಳಿತ ಮುಕ್ತೆಸರರಾದ ಸಂಜೀವ ನಾಯಕ್ ಕಲ್ಲೆಗ, ಜಿಲ್ಲಾ ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, A.P.M.C ಯ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ತಾಲೂಕ್ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಅಬ್ಬಸಾಲಿ, ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಮಧುಶೂದನ್ ಶೆಣೈ, ಪಾಣೆ ಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ, ಕಶೆಕೋಡಿ ದೇವಸ್ಥಾನದ ಕಾರ್ಯದರ್ಶಿಗಳಾದ ರತ್ನಾಕರ, ಪ್ರಭಾಕರ ಸೊಸೈಟಿ, ಸತೀಶ್ ಬೋಳಂಗಡಿ, ರವೀಂದ್ರ ನಾಯಕ್ ಮುಗೇರು. ಕಾರ್ಯಕ್ರಮದ ಪ್ರಚಾರಕರಾದ ಯಶವಂತ್ ಪ್ರಭು ಶಕ್ತಿನಗರ, ದಿವಾಕರ್ ಲೋಕೇಶ್ ನಾಯಕ್ ವಾಮದಪದವು,ಅಕ್ಷಯ ಪ್ರಭು ವಾಮದಪದವು ಹಾಗೂ ದೇವಸ್ಥಾನದ ಸಮಿತಿಯ ಸದಸ್ಯರು ಮತ್ತು ಭಕ್ತಾದಿಗಳು ಭಾಗಿಯಾಗಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...