Sunday, April 7, 2024

ಕನ್ನಡ ಸಾಹಿತ್ಯ ಯಕ್ಷಗಾನ ಮತ್ತು ರಂಗಭೂಮಿಗೆ ಡಾ.ಶಿವರಾಂ ಕಾರಂತರ ಕೊಡುಗೆ ಸ್ಮರಣೀಯ-ಡಾ.ಮಂಜುನಾಥ ರೇವಣ್‌ಕರ್

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಡಾ.ಶಿವರಾಂ ಕಾರಂತ ಇವರ 120ನೇ ಪುಣ್ಯ ಜಯಂತಿಯ ಕಾರ್ಯಕ್ರಮ ದ.ಕ ಜಿಲ್ಲಾ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜರುಗಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಮಂಜುನಾಥ ರೇವಣ್‌ಕರ್ ಅವರು ಡಾ.ಶಿವರಾಂ ಕಾರಂತರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಡಾ.ಶಿವರಾಂ ಕಾರಂತ ಅವರ ಸೇವೆ ಅತ್ಯಮೂಲ್ಯ. ಇವರ ಸಾಹಿತ್ಯ, ಯಕ್ಷಗಾನ ಸೇವೆಗೆ ಅವರು ಹಾಕಿದ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಿದಲ್ಲಿ ಸುಭೀಕ್ಷವಾದ ಸಮಾಜದ ನಿಮಾರ್ಣವಾಗಲು ಸಾಧ್ಯವಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಗೌರವ ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್, ಡಾ.ಮುರಲೀ ಮೋಹನ್ ಚೂಂತಾರು, ಕಸಾಪದ ಕಾರ್ಯಕಾರಿ ಸಮಿತಿಯ ಸದಸ್ಯ ಬಿ. ಕೃಷ್ಣಪ್ಪ ನಾಯ್ಕ್, ಡಾ.ಮೀನಾಕ್ಷಿ ರಾಮಚಂದ್ರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕೋಶಾಧಿಕಾರಿಎನ್.ಸುಬ್ರಾಯ ಭಟ್ ವಂದಿಸಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...