Tuesday, April 16, 2024

ಕುಲಾಲ ಸೇವಾದಳದ ಚೈತನ್ಯ ಬದುಕಿಗೊಂದು ಬೆಳಕು ನಿರಂತರ ಕಾರ್ಯಾಗಾರಕ್ಕೆ ಚಾಲನೆ

ಬಂಟ್ವಾಳ: ಚೈತನ್ಯ ಕಾರ್ಯಕ್ರಮದಿಂದ ಎಲ್ಲರಿಗೂ ಹೊಸ ಅವಕಾಶಗಳು ಸಿಗಲಿ. ಎಲೆಮರೆಯ ಕಾಯಿಯಂತೆ ಇರುವ ಪ್ರತಿಭೆಗಳು ಬೆಳಕಿಗೆ ಬರಲಿ. ಇದೊಂದು ವಿಶೇಷವಾದ ಕಾರ್ಯಾಗಾರ ನಿರಂತರವಾಗಿ ನಡೆಯಲಿ ಎಂದು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚೆನ್ನಕೇಶವ ತಿಳಿಸಿದರು.

ಆದಿತ್ಯವಾರ ಪೊಸಳ್ಳಿ ಕುಲಾಲ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ಹಮ್ಮಿಕೊಂಡಿದ್ದ ಚೈತನ್ಯ ಬದುಕಿಗೊಂದು ಬೆಳಕು ನಿರಂತರ ಕಾರ್ಯಾಗಾರವನ್ನು ಹಣತೆಗಳನ್ನು ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಡ್ಯಾನ್ಸ್ ಕೋರಿಯೋಗ್ರಾಫರ್ ಮಹೇಶ್ ಕುಲಾಲ್ ಕಡೇಶಿವಾಲಯ ಮಾತನಾಡಿ ನಾವು ಸಣ್ಣವರಿರುವಾಗ ಅವಕಾಶಗಳಿರಲಿಲ್ಲ, ನಮ್ಮ ಪ್ರತಿಭೆಗಳನ್ನು ಬೆಳಕಿಗೆ ತರಬೇಕಾದರೆ ತುಂಬಾ ಕಷ್ಟಗಳನ್ನು ಪಟ್ಟಿದ್ದೇವೆ. ಆದರೆ ಈಗಿನ ಮಕ್ಕಳಿಗೆ ಚೈತನ್ಯ ಕಾರ್ಯಾಗಾರದ ಮುಖಾಂತರ ಹೊಸ ವೇದಿಕೆ ದೊರೆತಂತಾಗಿದೆ. ಅದನ್ನು ಸರಿಯಾದ ಎಲ್ಲರೂ ಬಳಸಿಕೊಳ್ಳಿ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ ಅಧ್ಯಕ್ಷತೆ ವಹಿಸಿದ್ದರು. ಪ್ರಾರ್ಥನೆ ಸಾನ್ವಿ, ಲೇಖನ್, ಮಿಥ್ವಿ, ವೈಷ್ಣವಿ ಪ್ರಾರ್ಥನೆ ಮಾಡಿದರು.

ಕುಲಾಲ ಸೇವಾದಳದ ಕಾರ್ಯದರ್ಶಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಸ್ವಾಗತಿಸಿದರು. ಸೇವಾದಳಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗಣೇಶ್ ಕುಲಾಲ್ ದುಗನಕೋಡಿ ಮತ್ತು ದರ್ಶನ್ ಮೊಡಂಕಾಪು ಅತಿಥಿಗಳ ಪರಿಚಯ ಮಾಡಿದರು.

ನಿಶ್ಮಿತಾ ಕನಪಾದೆ ಮತ್ತು ಚಿರಾಗ್ ಮೈಯ್ಯರಬೈಲು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ್ ಭಂಡಾರಿಬೆಟ್ಟು ಧನ್ಯವಾದ ನೀಡಿದರು.

ದೇವದಾಸ ಅಗ್ರಬೈಲು, ರಾಘವೇಂದ್ರ ಮೈರಾನ್‌ಪಾದೆ, ರಾಜೇಶ್ ರಾಯಿ, ನೂತನ್ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

ಸಭಾಕಾರ್ಯಕ್ರಮದ ನಂತರ ಡ್ಯಾನ್ಸ್‌ಕೊರೀಯೋಗ್ರಾಫರ್ ಮಹೇಶ್ ಕುಲಾಲ್‌ರವರು ಮಕ್ಕಳಿಗೆ ಡ್ಯಾನ್ಸ್ ತರಬೇತಿಗೆ ಚಾಲನೆ ನೀಡಿದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...